ಬೆಂಗಳೂರು: ಮಾಜಿ ಸಚಿವ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ವಿರುದ್ದ ಜೆಡಿಎಸ್ ಹರಿಹಾಯ್ದಿದೆ. ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಮುಸ್ಲಿಂ ಸಮುದಾಯಕ್ಕೆ ಜಮೀರ್ಗಿಂತ ದೊಡ್ಡ ಶತ್ರು ಬೇರೆ ಯಾರೂ ಇಲ್ಲ ಎಂದಿದೆ.
‘ಇಬ್ರಾಹಿಂ ಅವರನ್ನು ಕಾಂಗ್ರೆಸ್ ನಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಂತೆ, ಈಗ ಅವರ ಮಗನ ವಿಷಯದಲ್ಲೂ ದುಷ್ಟತಂತ್ರ ಹೂಡಲು ಹೊರಟಿದ್ದೀರಿ. ಸಿದ್ದಹಸ್ತನ ಜತೆ ಸೇರಿ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಮುಗಿಸಿದ ಮಿಸ್ಟರ್ ಜಮೀರ್, ಮುಸ್ಲಿಂ ಸಮುದಾಯಕ್ಕೆ ನಿಮಗಿಂತ ದೊಡ್ಡ ಶತ್ರು ಬೇರೆ ಯಾರೂ ಇಲ್ಲ. ಸಮುದಾಯಕ್ಕೆ ಈ ಸತ್ಯ ಅರ್ಥವಾಗಿದೆ’ ಎಂದವರು ಟ್ವೀಟಾಸ್ತ್ರ ಪ್ರಯೋಗಿಸಿದೆ..
ಇಬ್ರಾಹಿಂ ಅವರನ್ನು ಕಾಂಗ್ರೆಸ್ ನಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಂತೆ, ಈಗ ಅವರ ಮಗನ ವಿಷಯದಲ್ಲೂ ದುಷ್ಟತಂತ್ರ ಹೂಡಲು ಹೊರಟಿದ್ದೀರಿ. ಸಿದ್ದಹಸ್ತನ ಜತೆ ಸೇರಿ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಮುಗಿಸಿದ ಮಿಸ್ಟರ್ ಜಮೀರ್, ಮುಸ್ಲಿಂ ಸಮುದಾಯಕ್ಕೆ ನಿಮಗಿಂತ ದೊಡ್ಡ ಶತ್ರು ಬೇರೆ ಯಾರೂ ಇಲ್ಲ. ಸಮುದಾಯಕ್ಕೆ ಈ ಸತ್ಯ ಅರ್ಥವಾಗಿದೆ.8/8
— Janata Dal Secular (@JanataDal_S) February 5, 2023
‘ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ? ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ’ ಎಂದು ಹೇಳಿದೆ.
ಇಬ್ರಾಹಿಂ ಅವರ ಪುತ್ರನ ಬಗ್ಗೆ ವಿಷಕಾರುವ ಕೆಟ್ಟ ಪ್ರಯತ್ನ ಮಾಡಿದ್ದೀರಿ. ಹುಮನಾಬಾದ್ ನಲ್ಲಿ ಯುವಕ ಸಿಎಂ ಫಯಾಜ್ ಗೆದ್ದೇ ಗೆಲ್ಲುತ್ತಾರೆ. ನಿಮಗೂ ಈ ವಿಷಯ ಚೆನ್ನಾಗಿ ಗೊತ್ತು. ಪಂಚರತ್ನ ರಥಯಾತ್ರೆ ಈ ಕ್ಷೇತ್ರದಲ್ಲಿ ಹೇಗೆ ಅಬ್ಬರಿಸಿತು ಎನ್ನುವ ಮಾಹಿತಿ ಪಡೆದುಕೊಳ್ಳಿ. ನಿಮ್ಮದೆ ಸಮುದಾಯದ ತರುಣನ ಮೇಲೆ ಈ ಪರಿಯ ಮತ್ಸರ ಏಕೆ ಜಮೀರ್? ಎಂದು ಜೆಡಿಎಸ್ ಪ್ರಶ್ನೆ ಮಾಡಿದೆ.
ಇಬ್ರಾಹಿಂ ಅವರನ್ನು ಕಾಂಗ್ರೆಸ್ ಪಕ್ಷದಲ್ಲಿ ಮುಗಿಸಲು ಹೊರಟಿದ್ದು ಸುಳ್ಳಾ? ನಿಮ್ಮ ರೀತಿ ಇಬ್ರಾಹಿಂ ಅವರು ರಾಜಕೀಯದಲ್ಲಿ ಸಭ್ಯತೆಯ ಎಲ್ಲೆ ಮೀರಿದವರಲ್ಲ. ಆದರೆ, ಸಭ್ಯತೆಯ ಗಂಧಗಾಳಿ ಗೊತ್ತಿಲ್ಲದ ನಿಮಗೆ ರಾಜಕೀಯ ಜನ್ಮಕೊಟ್ಟ ಮಾತೃಪಕ್ಷದ ಬಗ್ಗೆ ಇರುವ ಮತ್ಸರ ನಿಮ್ಮ ಕೊಳಕು ಮನಃಸ್ಥಿತಿಗೆ ಹಿಡಿದ ಕನ್ನಡಿ ಎಂದು ಟೀಕಿಸಿದೆ.
ಇಬ್ರಾಹಿಂ ಅವರನ್ನು ಕಾಂಗ್ರೆಸ್ ಪಕ್ಷದಲ್ಲಿ ಮುಗಿಸಲು ಹೊರಟಿದ್ದು ಸುಳ್ಳಾ? ನಿಮ್ಮ ರೀತಿ ಇಬ್ರಾಹಿಂ ಅವರು ರಾಜಕೀಯದಲ್ಲಿ ಸಭ್ಯತೆಯ ಎಲ್ಲೆ ಮೀರಿದವರಲ್ಲ. ಆದರೆ, ಸಭ್ಯತೆಯ ಗಂಧಗಾಳಿ ಗೊತ್ತಿಲ್ಲದ ನಿಮಗೆ ರಾಜಕೀಯ ಜನ್ಮಕೊಟ್ಟ ಮಾತೃಪಕ್ಷದ ಬಗ್ಗೆ ಇರುವ ಮತ್ಸರ ನಿಮ್ಮ ಕೊಳಕು ಮನಃಸ್ಥಿತಿಗೆ ಹಿಡಿದ ಕನ್ನಡಿ.7/8
— Janata Dal Secular (@JanataDal_S) February 5, 2023