ಬೆಂಗಳೂರು: ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್-ಬಿಜೆಪಿ ಇದೀಗ ಸೀಟು ಹಂಚಿಕೆಯನ್ನೂ ಫೈನಲ್ ಮಾಡಿದೆ.
ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲು ತೀರ್ಮಾನಿಸಿರುವ ಬಿಜೆಪಿ, ದೇವೇಗೌಡರ ಪಕ್ಷಕ್ಕೆ ಕರ್ನಾಟಕದ ಮೂರು ಸ್ಥಾನಗಳನ್ನು ನೀಡಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬಿಜೆಪಿ ಕಾರ್ಯಾಗಾರದಲ್ಲಿ ಮಾತನಾಡಿದ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್, ಕೋಲಾರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಟ್ಟಿದ್ದೇವೆ ಎಂದರು.
ಜೆಡಿಎಸ್‍ಗೆ ಕೋಲಾರ, ಹಾಸನ, ಮಂಡ್ಯ ಕ್ಷೇತ್ರಗಳನ್ನು ಬಿಟ್ಟು ಕೊಡಲಾಗಿದ್ದು, ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ ಎನ್ಡಿಎ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲ್ಲುವಂತಾಗಬೇಕು ಎಂದರು,