ಬೆಂಗಳೂರು: ಸುಳ್ಳಿನ ಶೂರ ಡಿ.ಕೆ.ಶಿವಕುಮಾರ್ ಅವರು ಒಕ್ಕಲಿಗ ಸಮುದಾಯ ಮತ್ತು ಪೂಜ್ಯ ಸ್ವಾಮೀಜಿ ಅವರಿಗೆ ನಿಮ್ಮ ಸರಕಾರ ಮಾಡಿಬಿಟ್ಟ ಅಪಚಾರ ಮುಚ್ಚಿಟ್ಟುಕೊಳ್ಳಲು ಇನ್ನೊಬ್ಬರ ಮೇಲೆ ಕೆಸರೆರೆಚುತ್ತಿದ್ದೀರಿ, ಯಾಕೆ? ಎಂದು ಜೆಡಿಎಸ್ ಪ್ರಶ್ನಿಸಿದೆ.
ಸ್ವಾಮೀಜಿ ಮೇಲೆ ನೀವು ಎಫ್ಐಆರ್ ಹಾಕಿದ್ದು ಈಗ ಸಮುದಾಯದ ಸಿಟ್ಟಿಗೆ ಕಾರಣವಾಗಿದೆ. ಒಕ್ಕಲಿಗರ ಆಕ್ರೋಶಕ್ಕೆ ನೀವು ಗುರಿಯಾಗಿದ್ದೀರಿ. ಬೀಸುವ ದೊಣ್ಣೆಯಿಂದ ಪಾರಾಗಲು ಜೆಡಿಎಸ್ ಬಗ್ಗೆ ಹೊಸ ಹುಳುಕು ಹುಡುಕುತ್ತಿದ್ದೀರಿ ಎಂದು ಜೆಡಿಎಸ್ ತನ್ನ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿದೆ.
ಜೆಡಿಎಸ್ ಸರಕಾರವಿದ್ದಾಗ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲೆ ಕೇಸು ಹಾಕಲಾಗಿತ್ತು ಎಂದು ಬಾಲಬುದ್ಧಿಯ ನೀವು ಬಡಬಡಿಸಿದ್ದೀರಿ! ಹಳೆಯ ವಿಷಯ ಕೆದಕಿದ ನಿಮಗೆ ಆ ಪ್ರಕರಣ ಏನು? ಅದು ಮುಂದೇನಾಯಿತು? ಎನ್ನುವ ಮಾಹಿತಿ ಇಲ್ಲವೇ? ಆ ಪ್ರಕರಣಕ್ಕೂ ಜೆಡಿಎಸ್ ಪಕ್ಷಕ್ಕೂ ಸಂಬಂಧ ಏನು? ಮುಂದೆ ಆ ಪ್ರಕರಣ ರದ್ದಾಯಿತು, ನಿಮಗೆ ಗೊತ್ತಿಲ್ಲವೇ? ಎಂದು ಕಾಂಗ್ರೆಸ್ ನಾಯಕರನ್ನು ಜೆಡಿಎಸ್ ಪ್ರಶ್ನಿಸಿದೆ.
ಸುಳ್ಳಿನ ಶೂರ @DKShivakumar
ಒಕ್ಕಲಿಗ ಸಮುದಾಯ ಮತ್ತು ಪೂಜ್ಯ ಸ್ವಾಮೀಜಿ ಅವರಿಗೆ ನಿಮ್ಮ ಸರಕಾರ ಮಾಡಿಬಿಟ್ಟ ಅಪಚಾರ ಮುಚ್ಚಿಟ್ಟುಕೊಳ್ಳಲು ಇನ್ನೊಬ್ಬರ ಮೇಲೆ ಕೆಸರೆರೆಚುತ್ತಿದ್ದೀರಿ, ಯಾಕೆ?
ಪೂಜ್ಯ ಸ್ವಾಮೀಜಿ ಅವರ ಮೇಲೆ ನೀವು ಎಫ್ಐಆರ್ ಹಾಕಿದ್ದು ಈಗ ಸಮುದಾಯದ ಸಿಟ್ಟಿಗೆ ಕಾರಣವಾಗಿದೆ. ಒಕ್ಕಲಿಗರ ಆಕ್ರೋಶಕ್ಕೆ ನೀವು ಗುರಿಯಾಗಿದ್ದೀರಿ.…
— Janata Dal Secular (@JanataDal_S) December 2, 2024
ಸ್ವಾಮೀಜಿ ವಿರುದ್ಧ ನಿಮ್ಮ ಇಡೀ ಕಾಂಗ್ರೆಸ್ ಸರಕಾರ ತೊಡೆತಟ್ಟಿ ನಿಂತಿದೆ. ಸಚಿವರುಗಳೆಲ್ಲ ಅವರ ಮೇಲೆ ರಕ್ಕಸರಂತೆ ಮುಗಿಬಿದ್ದಿದ್ದಾರೆ. ಹೇಳಿಕೆಯ ಬಗ್ಗೆ ಪರಮಪೂಜ್ಯರು ವಿಷಾದ ವ್ಯಕ್ತಪಡಿಸಿದ ಮೇಲೆಯೂ ಅವರ ಮೇಲೆ ಸರಕಾರ ಯಾರದೋ ನಿರ್ದಿಷ್ಟ ಚಿತಾವಣೆಗೆ ಒಳಗಾಗಿ ಕಾಲು ಕೆರೆದು ಜಗಳಕ್ಕೆ ನಿಂತಿದೆ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅಪಮಾನಕರವಾಗಿ ವರ್ತಿಸುತ್ತಿದೆ. ಓಲೈಕೆ ರಾಜಕೀಯ, ತುಷ್ಟೀಕರಣದ ಪರಾಕಾಷ್ಠೆ ಇದು. ಒಕ್ಕಲಿಗರಿಗೆ ಇದೆಲ್ಲಾ ಅರ್ಥವಾಗುತ್ತಿದೆ ಎಂದು ಜೆಡಿಎಸ್ ಹೇಳಿದೆ.
ಒಕ್ಕಲಿಗ ವಿರೋಧಿ ಡಿಕೆಶಿಯವರೇ.. ನಿಮಗಿದು ತರವೇ? ಎಂದು ಕೆಣಕಿರುವ ಜೆಡಿಎಸ್, ನಿಮ್ಮ ಸರಕಾರ, ನಿಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಿಗೆ ಬುದ್ಧಿ ಹೇಳುವ ಕನಿಷ್ಠ ಧೈರ್ಯವನ್ನಾದರೂ ಮಾಡಿ. ಅಧಿಕಾರಕ್ಕಾಗಿ ಸಮುದಾಯದಿಂದ ಪೆನ್ನು ಪೇಪರ್ ಭಿಕ್ಷೆ ಬೇಡಿದ ನಿಮಗೆ ಈಗ ಸಮುದಾಯ ಕಾಲ ಕಸವಾಗಿದೆ. ಇದಕ್ಕೆ ನೀವು ಬೆಲೆ ತೆರುತ್ತೀರಿ ಎಂದು ಬರೆದುಕೊಂಡಿದೆ.