ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಸುದ್ದಿ ಜೆಡಿಎಸ್ ಕಾರ್ಯಕರ್ತರ ಆತಂಕಕ್ಕೆ ಕಾರಣವಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೆಲವು ದಿನಗಳ ಹಿಂದಷ್ಟೇ ಬಂಧನಕ್ಕೊಳಗಾಗಿದ್ದು ಇದೀಗ ಸಹೋದರ ಸೂರಜ್ ರೇವಣ್ಣ ಕೂಡಾ ಬಂಧನಕ್ಕೊಳಗಾಗಿದ್ದಾರೆ.
ಸೂರಜ್ ರೇವಣ್ಣ ವಿರುದ್ದ ಸಂತ್ರಸ್ತ ಎನ್ನಲಾದ ವ್ಯಕ್ತಿ ಹಾಸನ ಎಸ್ಪಿ ಹಾಗೂ ಹಿರಿಯ ಅಧಿಕಾರಿಗಳಿಗೆ ದೂರು ನೀಡದ್ದ. ಈ ದೂರನ್ನು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಹಾಸನದ ಸೆನ್ ಠಾಣೆ ಪೊಲೀಸರು ಸೂರಜ್ ಅವರನ್ನು ಬಂಧಿಸಿದ್ದಾರೆ.
ಈ ನಡುವೆ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಇಡೀ ಕುಟುಂಬ ಇದೀಗ ಕಾನೂನಿನ ಕುಣಿಕೆಯಲ್ಲಿ ಸಿಲುಕಿರುವುದು ಅಚ್ಚರಿಯ ಸಂಗತಿ. ಹೆಚ್.ಡಿ.ರೇವಣ್ಣ, ಪತ್ನಿ ಭವಾಣಿ ರೇವಣ್ಣ, ಪುತ್ರರಾದ ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಅವರ ವಿರುದ್ದ ಗಂಭೀರ ಆರೋಪ ಕೇಳಿಬಂದಿರುವುದು ಅಚ್ಚರಿಯ ಸಂಗತಿ. ಸೂರಜ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ ಬೆಳವಣಿಗೆ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಗಲಿಬಿಲಿಗೊಂಡಿದ್ದಾರೆ.