ಬೆಂಗಳೂರು: ಮೈಸೂರು ಭಾಗದ ಪ್ರಭಾವಿ ಜೆಡಿಎಸ್ ನಾಯಕ, ವಿಧಾನ ಪರಿಷತ್ ಸದಸ್ಯ ಸಂದೇಶ ನಾಗರಾಜ್ ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಗೆ ಶುಕ್ರವಾರ ಭೇಟಿ ನೀಡಿಕಮಲ ನಾಯಕರನ್ನು ಭೇಟಿಯಾದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂದೇಶ್ ನಾಗರಾಜ್ , ಜನವರಿ 5 ರ ವರೆಗೆ ನಾನು ಜೆಡಿಎಸ್ ನಲ್ಲಿ ಉಳಿಯುತ್ತೇನೆ, ಆ ಬಳಿಕ ಬಿಜೆಪಿ ಸೇರುತ್ತೇನೆ ಎಂದರು. ಮೂರನೇ ಬಾರಿ ಚಾಮರಾಜನಗರ-ಮೈಸೂರು ಸ್ಥಳೀಯ ಸಂಸ್ಥೆಗಳಿಂದ ಸ್ಪರ್ಧಿಸುವುದಾಗಿ ಅವರು ತಿಳಿಸಿದರು.