ಬೆಂಗಳೂರು: ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ವಾರ್ತಾ ಇಲಾಖೆಯಿಂದ ನೀಡಲಾಗುವ ಉಚಿತ ಹೆಲ್ತ್ ಕಾರ್ಡ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಬೆಂಗಳೂರಿನಲ್ಲಿಂದು ಗಾಂಧೀ ಜಯಂತಿ ಕಾರ್ಯಕ್ರಮ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೆಲ್ತ್ ಕಾರ್ಡನ್ನು ಸಾಂಕೇತಿಕವಾಗಿ ವಿತರಿಸಿದರು.
ವಿಧಾನಸೌಧ ಆವರಣದಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ದಿ.ಲಾಲ್ ಬಹದ್ದೂರ್ ಶಾಸ್ತ್ರಿ 116ನೇ ಜನ್ಮದಿನ ಅಂಗವಾಗಿ ಅವರ ಪ್ರತಿಮೆ ಬಳಿಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 151 ನೇ ಜನ್ಮ ದಿನದದ ಅಂಗವಾಗಿ ಅವರ ಪ್ರತಿಮೆ ಬಳಿಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.
ಈ ವೇಳೆ, ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ವಾರ್ತಾ ಇಲಾಖೆಯಿಂದ ನೀಡಲಾಗುವ ಉಚಿತ ಹೆಲ್ತ್ ಕಾರ್ಡ್’ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮತ್ತು IFWJ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಅವರಿಗೆ ನೀಡುವ ಮೂಲಕ ಚಾಲನೆ ನೀಡಿದರು.