ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ರಾಜ್ಯಸಭೆಯಲ್ಲಿ ‘ಮೇಲ್ಮನೆ ಸಭಾ ನಾಯಕ’ ಸ್ಥಾನಕ್ಕೆ ಆಯ್ಕೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಈ ಜವಾಬ್ದಾರಿ ಜೊತೆಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮತ್ತಷ್ಟು ತಿಂಗಳು ಮುಂದುವರಿಸುವ ಸಾಧ್ಯತೆಗಳೂ ಇವೆ. ನಡ್ಡಾ ಅವರ ಅವಧಿಯು ಈ ತಿಂಗಳು ಕೊನೆಗೊಳ್ಳುತ್ತದೆ. ಆದರೆ ಈ ವರ್ಷಾಂತ್ಯದಲ್ಲಿ 4 ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯಲಿದ್ದು ಆವರೆಗೂ ಅವರನ್ನು ಪಕ್ಷದ ಸಾರಥಿಯನ್ನಾಗಿ ಮುಂದುವರಿಯಲಿದ್ದಾರೆ ಎನ್ನಲಾಗುತ್ತಿದೆ.