ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ದದ ಅಶ್ಲೀಲ ವೀಡಿಯೋ ಪ್ರಕರಣ ರಾಜಕಾರಣದಲ್ಲಿ ಸಂಘರ್ಷವನ್ನು ಹುಟ್ಟುಹಾಕಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರ ವಾಗ್ದಾಳಿ ಪ್ರತಿದಾಳಿ ತೀವ್ರಗೊಂಡಿದೆ. ಇದೇ ವೇಳೆ, ಮಹಿಳೆಯೊಬ್ಬರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರನ್ನು ಎಸ್‌ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ರೇವಣ್ಣ ಅವರ ಆಪ್ತ ಸತೀಶ್ ಬಾಬಣ್ಣ ಅವರನ್ನು ಪೊಲೀಸರು ಕಳೆದ ವಾರವೇ ಬಂಧಿಸಿತ್ತು. ಇದೀಗ ಮೈಸೂರಿನ ಕೆ.ಆರ್. ನಗರ ಮೂಲದವರೆನ್ನಲಾದ ಮತ್ತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
























































