ಮಡಿಕೇರಿ: ಬೇಸಿಗೆ ಸಂದರ್ಭದಲ್ಲಿ ಕಾಡ್ಗಿಚ್ಚು ತಡೆಯಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಕಾಡ್ಗಿಚ್ಚು ನಿಯಂತ್ರಿಸಲು ಅರಣ್ಯ ಇಲಾಖೆ 2000 ಕಿಲೋಮೀಟರ್‌ಗೂ ಹೆಚ್ಚು ಫೈರ್‌ಲೈನ್ ಎಳೆಯಲು ಅರಣ್ಯ ಇಲಾಖೆ ಮುಂದಾಗಿದೆ. ಅದರಲ್ಲೂ ನಾಗರಹೊಳೆ ಅಭಯಾರಣ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ನಾಗರಹೊಳೆ ಅಭಯಾರಣ್ಯದಲ್ಲಿ 840 ಚದರ ಕಿಲೋಮೀಟರ್ ಪ್ರದೇಶದಲ್ಲಿ ಅಗ್ನಿಶಾಮಕ ರೇಖೆಗಳನ್ನು ಎಳೆಯಲು ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ, ಹೆಚ್ಚುವರಿಯಾಗಿ 400 ಅರಣ್ಯ ವೀಕ್ಷಕರನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ಕಾಣಿಸಿಕೊಂಡಲ್ಲಿ ತಕ್ಷಣದ ಕಾರ್ಯಾಚರಣೆಗಾಗಿ ಜೀಪ್‌ಗಳಲ್ಲಿ ಟ್ಯಾಂಕರ್‌ಗಳನ್ನು ಅಳವಡಿಸಲಾಗಿದ್ದು, ಈ ವಾಹನದಲ್ಲಿ ಅರಣ್ಯ ಇಲಾಖೆ ತಂಡಗಳು ಗಸ್ತು ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



















































