ಬೆಂಗಳೂರು: ‘ಕಾಂತಾರ’ ಸಿನಿಮಾ ಯಶಸ್ಸಿನ ಸಂದರ್ಭದಲ್ಲಿ ಭೂತಕೋಲ ವಿಚಾರದಲ್ಲಿ ನಟ ಚೇತನ್ ನೀಡಿದ್ದ ಹೇಳಿಕೆ ವಿವಾದಕ್ಕೆ ಗುರಿಯಾಗಿತ್ತು. ಈ ಸಂಬಂಧ ತಮ್ಮ ವಿರುದ್ದ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಚೇತನ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ.
ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ನಟ ಚೇತನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಪೀಠ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿದೆ.














































































