ರಿಯಲ್ ಸ್ಟರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಒಂದೇ ಚಿತ್ರದಲ್ಲಿ ನಟಿಸುತ್ತಾರೆ ಎಂಬ ಕುತೂಹಲದ ಮಾಹಿತಿ ಗಂಧದ ಗುಡಿಯಲ್ಲಿ ಹರಿದಾಡುತ್ತಿತ್ತು. ಇದೀಗ ಆ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ.
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್.ಚಂದ್ರು ಕಾಂಬಿನೇಶನ್ ನಲ್ಲಿ ‘ಕಬ್ಜ’ ಸಿನಿಮಾ ನಿರ್ಮಾಣವಾಗುತ್ತಿದ್ದು ಕಿಚ್ಚ ಸುದೀಪ್ ಕೂಡಾ ಇದರಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ಇಂದು ಬಿಡುಗಡೆಯಾಗಿದೆ. ನಟ ಉಪೇಂದ್ರ ಅವರು ಈ ಫೊಟೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.
#Kabzaa #rchandru #KicchaSudeep pic.twitter.com/WVvwqsId2R
— Upendra (@nimmaupendra) June 27, 2021
ಭೂಗತ ಲೋಕದ ಕಥಾನಕದ ಸ್ಪರ್ಶದೊಂದಿಗೆ ಈ ಸಿನಿಮಾ ಸಿದ್ದವಾಗಲಿದೆಯಂತೆ. ‘ಭಾರ್ಗವ್ ಬಕ್ಷಿ’ ಎಂಬ ಪಾತ್ರದಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಳ್ಳಲಿದ್ದಾರಂತೆ. ಬಹು ಭಾಷೆಗಳಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ಇಂದು ಅನಾವರಣಗೊಂಡ ಫೊಟೋದಲ್ಲಿ ಉಪೇಂದ್ರ ಹಾಗೂ ಸುದೀಪ್ ಖಡಕ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫಸ್ಟ್ ಲುಕ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಲೈಕ್ಸ್ ಸಿಗುತ್ತಿದೆ.