ಕಲಬುರಗಿ: ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕಲಬುರಗಿಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಮೆರವಣಿಗೆಯ ಮೂಲಕ ಖರ್ಗೆಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು..
ಮೆರವಣಿಗೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೀವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ನಾಯಕರು ಉಪಸ್ಥಿತರಿದ್ದರು.
























































