ಬೆಂಗಳೂರು: ರಾಜ್ಯದಲ್ಲಿ ಕನ್ನಡ ಕಡ್ಡಾಯ, ಕನ್ನಡದಲ್ಲಿ ನಾಮಫಲಕವೂ ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡದಲ್ಲಿ ನಾಮಫಲಕ ಅಳವಡಿಸಲು ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ ಎಂದು ಅವರು ಜನತೆಗೆ ಕರೆ ನೀಡಿದ್ದಾರೆ.
ಕನ್ನಡ ಕಡ್ಡಾಯ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ’ ಎಂದಿದ್ದಾರೆ.
ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ. ಎಂದವರು ಕರೆ ಕೊಟ್ಟಿದ್ದಾರೆ.
ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ.
ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ.
ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ… pic.twitter.com/QoEbZEVTAS
— Siddaramaiah (@siddaramaiah) December 25, 2023






















































