ಕೇಂದ್ರ ಸರ್ಕಾರದ ಕನ್ನಡ ವಿರೋಧಿ ನಿಲುವು ತಾಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ತೋರುವ ದೋರಣೆ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಆಗಬೇಕು ಎಂದು ಒತ್ತಾಯಿಸಿದರು.
ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಚರ್ಚೆ ಮಾಡುವವರು ಇಲ್ಲದಂತಾಗಿದೆ. ಬಿಜೆಪಿಯ 25 ಸಂಸದರಿದ್ದರೂ ಕನ್ನಡಕ್ಕೆ ಧಕ್ಕೆ ಆಗುತ್ತಿದೆ. ಸುದೀರ್ಘ ಚರ್ಚೆ ಆಗಬೇಕಾದ ಅನಿವಾರ್ಯ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ತಂದೊಡ್ಡಿದೆ ಎಂದು ಹೆಚ್ಡಿಕೆ ಕಿಡಿಕಾರಿದರು.