ಬೆಂಗಳೂರು: ಸ್ಯಾಂಡಲ್ವುಡ್ ನಟ ಸತ್ಯಜಿತ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಕನ್ನಡದಲ್ಲಿ 650ಕ್ಕೂ ಸಿನಿಮಾಗಳಲ್ಲಿ ನಟಿಸಿರುವ ಸತ್ಯಜಿತ್ ವಿಭಿನ್ನ ಪಾತ್ರಗಳಲ್ಲಿ ಮಿಂಚಿದ್ದರು. ಸತ್ಯಜಿತ್ ನಿಧನಕ್ಕೆ ಚಿತ್ರರಂಗದ ಗಣ್ಯರನೇಕರು ಕಂಬನಿ ಮಿಡಿದಿದ್ದಾರೆ.