ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 3-4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞತು ಮುನ್ಸೂಚನೆ ನೀಡಿದ್ದಾರೆ. ಮಾಂಡೌಸ್ ಚಂಡಮಾರುತದ ಪರಿಣಾಮ ದಕ್ಷಿಣದ ರಾಜ್ಯಗಳಲ್ಲಿ ಹವಾಮಾನ ವೈಪರೀತ್ಯ ಕಂಡುಬಂದಿದೆ. ಬಂಗಾಳಕೊಲ್ಲಿ ತೀರದ ರಾಜ್ಯಗಳಾದ ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ರಾತ್ರಿಯಿಂದಲೇ ತುಂತುರು ಮಳೆಯಾಗುತ್ತಿದ್ದು ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಡಿಸೆಂಬರ್ 14ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ..























































