ಬೆಂಗಳೂರು: ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಗೆದ್ದರೆ ಒಂದು ಕುಟುಂಬಕ್ಕೆ ಎಟಿಎಂ ಆಗುತ್ತದೆ ಎಂದು ಟೀಕಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಅಮಿತ್ ಶಾ ಅವರ ಪ್ರತಿ ಟೀಕೆಗೂ ತಿರುಗೇಟು ನೀಡಿದ್ದಾರೆ. ಅಲ್ಲದೆ, ಬಿಜೆಪಿಯನ್ನು ಬರೀ ಬೂಟಾಟಿಕೆ ಪಾರ್ಟಿ ಎಂದು ಜರೆದಿದ್ದಾರೆ.
ಬರೀ ಬೂಟಾಟಿಕೆ ಪಾರ್ಟಿ (ಬಿಜೆಪಿ) ಸುಳ್ಳುಕೋರರ ಸಂತೆ ಎನ್ನುವುದಕ್ಕೆ ಮಂಡ್ಯದಲ್ಲಿ ಸುಖಾಸುಮ್ಮನೆ ಅಲವತ್ತುಕೊಂಡ ನಿಮ್ಮ ಅಸತ್ಯದ ಹಾಹಾಕಾರದ ವರಸೆಯೇ ಸಾಕ್ಷಿ. ಸ್ಥಳಕ್ಕೊಂದು ವೇಷ, ಕ್ಷಣಕ್ಕೊಂದು ಸುಳ್ಳು; ಇದು ನಿಮ್ಮ ಪಕ್ಷದ ನಿಜ ಸ್ವರೂಪ. ನೀವು ಸರ್ವಾಧಿಕಾರಿ ಹಿಟ್ಲರನ ಸಂಪುಟದ ಗೊಬೆಲ್ಲನ ಹೊಸ ಅವತಾರ!! ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಳ್ಳಬೇಕಾದ ಕರ್ಮ ನಿಮಗೇಕೆ ಬಂತು ಅಮಿತ್ ಶಾ ಅವರೇ? ಎಂದು ಟಾಂಗ್ ನೀಡಿದ್ದಾರೆ.
ಕರ್ನಾಟಕ ಬಿಜೆಪಿ ಫ್ಯಾಮಿಲಿ ಪಾಲಿಟಿಕ್ಸ್ ಪಟ್ಟಿಯನ್ನು ಉಲ್ಲೇಖ ಮಾಡಿರುವ ಹೆಚ್ಡಿಕೆ ಅವರು; ಯಡಿಯೂರಪ್ಪ & ಸನ್ಸ್, ರವಿಸುಬ್ರಮಣ್ಯ – ತೇಜಸ್ವಿ ಸೂರ್ಯ, ಅಶೋಕ್ -ರವಿ, ವಿ.ಸೋಮಣ್ಣ & ಸನ್, ಅರವಿಂದ ಲಿಂಬಾವಳಿ -ರಘು, ಎಸ್.ಆರ್.ವಿಶ್ವನಾಥ್ – ವಾಣಿ ವಿಶ್ವನಾಥ್, ಜಗದೀಶ್ ಶೆಟ್ಟರ್ – ಪ್ರದೀಪ್ ಶೆಟ್ಟರ್, ಮುರುಗೇಶ್ ನಿರಾಣಿ – ಹನುಮಂತ ನಿರಾಣಿ, 9. ಜಿ ಎಸ್ ಬಸವರಾಜು – ಜ್ಯೋತಿ ಗಣೇಶ್, ಜಾರಕಿಹೊಳಿ & ಬ್ರದರ್, ಜೊಲ್ಲೆ & ಜೊಲ್ಲೆ, ಅಂಗಡಿ ಕುಟುಂಬ, ಉದಾಸಿ ಕುಟುಂಬ, ಶ್ರೀರಾಮುಲು ಕುಟುಂಬ, ರೆಡ್ಡಿ & ರೆಡ್ಡಿ ಎಂದು ಹೇಳಿ ಅಮಿತ್ ಶಾ ಆವರ ಗಮನಕ್ಕೆ ತಂದಿದ್ದಾರೆ.
9. ಜಿ ಎಸ್ ಬಸವರಾಜು – ಜ್ಯೋತಿ ಗಣೇಶ್
10. ಜಾರಕಿಹೊಳಿ & ಬ್ರದರ್
11. ಜೊಲ್ಲೆ & ಜೊಲ್ಲೆ
12. ಅಂಗಡಿ ಕುಟುಂಬ
13. ಉದಾಸಿ ಕುಟುಂಬ
14. ಶ್ರೀರಾಮುಲು ಕುಟುಂಬ
15. ರೆಡ್ಡಿ & ರೆಡ್ಡಿಇದು ಕೂಡ ಅಪೂರ್ಣ ಪಟ್ಟಿಯೇ. ರಾಷ್ಟ್ರೀಯ ಪಟ್ಟಿ ಬೇಕಿದ್ದರೆ ಹೇಳಿ, ಇದರ ಹತ್ತರಷ್ಟಿದೆ. 9/11
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 31, 2022
ಹಾಗೆಯೇ; ಇದು ಕೂಡ ಅಪೂರ್ಣ ಪಟ್ಟಿಯೇ. ರಾಷ್ಟ್ರೀಯ ಪಟ್ಟಿ ಬೇಕಿದ್ದರೆ ಹೇಳಿ, ಇದರ ಹತ್ತರಷ್ಟಿದೆ ಎಂದು ಹೆಚ್ಡಿಕೆ ಟ್ವೀಟಾಸ್ತ್ರ ಪ್ರಯೋಗಿಸಿದ್ದಾರೆ.