ಬೆಂಗಳೂರು: ಬಿಜೆಪಿ ರಾಜ್ಯ ಬಿಜೆಪಿಯ ಹೊಸ ಕೋರ್ ಕಮಿಟಿ ರಚನೆಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳ ಸಹಿತ ಪ್ರಮುಖ ನಾಯಕರನ್ನೊಳಗೊಂಡ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಕರ್ನಾಟಕ ರಾಜ್ಯದ ಬಿಜೆಪಿ ಕೋರ್ ಕಮಿಟಿಯನ್ನು ಪ್ರಕಟಿಸಿದ್ದು, ವಿವರ ಹೀಗಿದೆ.
ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕಮಾರ್ ಕಟೀಲ್, ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರು ಮತ್ತು ರಾಜ್ಯದ ಮಾಜಿ ಅಧ್ಯಕ್ಷರಾದ ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ರಾಜ್ಯ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ|| ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ರಾಜ್ಯದ ಸಚಿವರಾದ ಆರ್. ಅಶೋಕ್ ಹಾಗೂ ಬಿ. ಶ್ರೀರಾಮುಲು, ಪಕ್ಷದ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್ ಅವರು ಕೋರ್ ಕಮಿಟಿಯಲ್ಲಿ ಇದ್ದಾರೆ.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್, ಸಿ.ಟಿ.ರವಿ, ರಾಷ್ಟ್ರೀಯ ಉಪಾಧ್ಯಕ್ಷರು ಮತ್ತು ರಾಜ್ಯ ಸಹ ಉಸ್ತುವಾರಿಗ ಡಿ.ಕೆ. ಅರುಣಾ ಅವರು ಕೋರ್ ಕಮಿಟಿಯ ವಿಶೇಷ ವಿಶೇಷ ಆಹ್ವಾನಿತರಾಗಿದ್ದಾರೆ.