ಬೆಂಗಳೂರು: ಮೊದಲ ಬಾರಿಗೆ ಚುನಾವಣೆ ಎದುರಿಸಿದ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 11 ಸ್ಥಾನಗಳ ಪೈಕಿ 6 ಬಿಜೆಪಿ ಅಭ್ಯರ್ಥಿಗಳು ಅದ್ಭುತ ಗೆಲುವು ಸಾಧಿಸಿದೆ. ಈ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.
ಈ ಬಗ್ಗೆ ಸಂತಸ ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಗೆಲುವು ಸಾಧಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಪ್ರಮುಖರು, ಜಿಲ್ಲಾಧ್ಯಕ್ಷರು, ಮುಖಂಡರು ಹಾಗೂ ದೇವದುರ್ಲಭ ಕಾರ್ಯಕರ್ತರು ಹಾಗೂ ಮತದಾರ ಬಂಧುಗಳಿಗೆ ಅನಂತ ಧನ್ಯವಾದಗಳು. ಜನತೆ ಬಯಸುತ್ತಿರುವುದು ಅಭಿವೃದ್ಧಿಯನ್ನು ಅಭಿವೃದ್ಧಿ ಎಂದರೆ ಬಿಜೆಪಿ (ಎನ್.ಡಿ.ಎ) ಎಂಬುದನ್ನು ಅಜ್ಜಂಪುರದ ವಿಜಯ ಸಾಕ್ಷೀಕರಿಸಿದೆ ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.



























































