ಬೆಂಗಳೂರು, ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿವಾದ ಕುರಿತಂತೆ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ರಾಜ್ಯ ಶಿಕ್ಷಣ ಇಲಾಖೆ ಆಯೋಜಿಸಿದ್ದ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಈ ಕುರಿತ ಧಾವೆ ರಾಜ್ಯ ಹೈಕೋರ್ಟ್ನಲ್ಲಿ ವಿಚಾರಣೆಗೆ ಬಂದಿದೆ. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ವಿಚಾರಣೆ ಪೂರ್ಣಗೊಂಡಿದೆ. ಶಿಕ್ಷಣ ಸಂಸ್ಥೆಗಳ ಹಾಗೂ ಸರ್ಕಾರದ ಪರವಾದ ವಾದವನ್ನು ಆಲಿಸಿರುವ ನ್ಯಾಯಪೀಠ, ತೀರ್ಪನ್ನು ಕಾಯ್ದಿರಿಸಿದೆ. ಕೆಲವೇ ದಿನಗಳಲ್ಲಿ ತೀರ್ಪು ಪ್ರಕಟವಾಗಲಿದೆ.
ಬೋರ್ಡ್ ಪರೀಕ್ಷೆ ವಿವಾದ ಕುರಿತಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಹೈಕೋರ್ಟ್ ಮೊರೆ ಹೋಗಿ ತಢಯಾಜ್ಞೆ ತಂದಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಸಿದ್ದು ಹಿಂದಿನ ತಡೆಯಾಜ್ಞೆಯನ್ನು ತೆರವುಗೊಳಿಸಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿತ್ತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿ ಮತ್ತೆ ತಡೆಯಾಜ್ಞೆ ತಂದಿದೆ. ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಹೈಕೋರ್ಟ್ ವಿಭಾಗೀಯ ಫೀಠದಲ್ಲಿ ಧಾವೆಯ ಇತ್ಯರ್ಥವಾಗಲೆಂದು ನಿರ್ದೇಶನ ನೀಡಿತ್ತು.
ಇದೀಗ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ಸರ್ಕಾರ ಮತ್ತು ಖಾಸಗಿ ಶಿಕ್ಷಣ ಸಂಸೆಗಳು ವಾದ ಮಂಡಿಸಿದ್ದು, ವಿಚಾರಣೆಯನ್ನು ಪೂರ್ಣಗೊಳಿಸಿರುವ ನ್ಯಾಯಪೀಠ ತೀರ್ಪನ್ನು ಕಾಯ್ದಿರಿಸಿದೆ.