ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿದ್ದು, ಸಿಎಂ ಸಿದ್ದರಾಮಯ್ಯ ಸಂಪುಟಕ್ಕೆ ಶನಿವಾರ 24 ಮಂದಿ ಸೇರ್ಪಡೆಯಾಗುವ ಮೂಲಕ ಪೂರ್ಣಪ್ರಮಾಣದ ಮಂತ್ರಿಮಂಡಲ ಅಸ್ತಿತ್ವಕ್ಕೆ ಬಂದಂತಾಗಿದೆ.
ಈ ನಡುವೆ ಯಾರಿಗೆ ಯಾವ ಖಾತೆ ಎಂಬ ಬಗ್ಗೆ ಕುತೂಹಲ ಉಂಟಾಗಿದೆ. ಇನ್ನೊಂದೆಡೆ ಖಾತೆ ಹಂಚಿಕೆ ಕುರಿತ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಇದು ಅಸಲಿಯಲ್ಲ, ನಕಲಿ ಪಟ್ಟಿ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಖಾತೆ ಸಂಬಂಧ ಪಟ್ಟಿ ಸಿದ್ದವಾಗಿದ್ದು ಇನ್ಬೂ ಹಂಚಿಕೆಯಾಗಿಲ್ಲ. ಆದರೆ ಪಟ್ಟಿಯೊಂದು ಹರಿದಾಡಿದ್ದರಿಂದ ಈ ಬಗ್ಗೆ ಮಾಧ್ಮಮಗಳು ಗಮನಕೇಂದ್ರೀಕರಿಸಿ ವರದಿ ಪ್ರಕಟಿಸಿವೆ.
ಈ ಕುರಿತಂತೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿರುವ ಆಡಳಿತ ಪಕ್ಷ ಕಾಂಗ್ರೆಸ್, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ, ಖಾತೆ ಹಂಚಿಕೆಯಾಗಿರುವ ಬಗೆಗಿನ ನಕಲಿ ಪಟ್ಟಿ ವೈರಲ್ ಆಗಿದೆ ಎಂದಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ ಎಂದಿರುವ ಕಾಂಗ್ರೆಸ್, ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಟ್ವೀಟ್ ಮಾಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ.
ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ.
ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.
— Karnataka Congress (@INCKarnataka) May 27, 2023