ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗಲಿದೆ. ಕರಾವಳಿ, ಮಲೆನಾಡು, ಬಯಲುಸೀಮೆ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಮಳೆಯಾಗುವ ಸಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು, ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. pic.twitter.com/MzPgVAO1on
— Karnataka State Natural Disaster Monitoring Centre (@KarnatakaSNDMC) May 28, 2023
ಎಲ್ಲೆಲ್ಲಿ ಮಳೆ ಸಾಧ್ಯತೆ?
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ತುಮಕೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಧಿಕ ಮಳೆ ಸಾಧ್ಯತೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಮೈಸೂರು ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ.
ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ.
#ಕರ್ನಾಟಕ ರಾಜ್ಯದಲ್ಲಿ ಮಳೆ ಮತ್ತು ಗರಿಷ್ಠ ತಾಪಮಾನದ ಮುನ್ಸೂಚನೆ ನಕ್ಷೆಗಳು 05th ಜೂನ್ 2023 ರವರೆಗೆ.
Rainfall and Maximum Temperature Forecast map for the #Karnataka State till 05th June 2023. pic.twitter.com/3hEzL12rIn— Karnataka State Natural Disaster Monitoring Centre (@KarnatakaSNDMC) May 28, 2023