ಬೆಂಗಳೂರು: ಕೋವಿಡ್ ರೂಪಾಂತರಿ ವೈರಸ್ ಹಾವಳಿ ತಲ್ಲಣದ ತರಂಗ ಎಬ್ಬಿಸಿದೆ. ಮತ್ತೊಂದು ಅಲೆಯ ಭೀತಿ ಎದುರಾಗಿದ್ದು, ಕರ್ನಾಟಕದಲ್ಲಿ ಬುಧವಾರ ಹೊಸದಾಗಿ 22 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದೇ ವೇಳೆ, ರಾಜ್ಯದಲ್ಲಿ ಕೊರೊನಾ ಸೋಂಕಿನಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೊಸ ಪ್ರಕರಣಗಳು:
- ಬೆಂಗಳೂರು ನಗರ ಜಿಲ್ಲೆ- 19,
- ಬಳ್ಳಾರಿ ಜಿಲ್ಲೆ – 2,
- ದಕ್ಷಿಣ ಕನ್ನಡ ಜಿಲ್ಲೆ – 1
ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್ಗಳ ಸಂಖ್ಯೆ 92ಕ್ಕೆ ಏರಿಕೆ ಆಗಿದೆ. ಈ ನಡುವೆ ರಾಜ್ಯಾದ್ಯಂತ ಪರೀಕ್ಷೆ ಹೆಚ್ಚಿಸಲಾಗಿದ್ದು ಸೋಂಕು ತಡೆಗೂ ಸೂಕ್ತ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.





































































