ಬೆಂಗಳೂರು: ರಾಜ್ಯದ ಕನ್ನಡ ಶಾಲೆಗಳ ಅವ್ಯವಸ್ಥೆ ಹಾಗೂ ಸದ್ಯದ ಪರಿಸ್ಥಿತಿ ಬಗ್ಗೆ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಕಾರ್ಯವೈಖಾರಿ ಬಗ್ಗೆ ಕಾಟು ಟೀಕೆ ಮಾಡಿದೆ.
‘ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ – ಸರ್ಕಾರಿ ಶಾಲೆಗೆ ಮಕ್ಕಳು ದಾಖಲಾಗುತ್ತಿಲ್ಲ’ ಎಂದು ಬಿಜೆಪಿ ಟೀಕಿಸಿದೆ. ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಾಲೆಗೆ ದಾಖಲಾಗುವ ಮಕ್ಕಳ ಪ್ರಮಾಣ ಗಣನೀಯ ಕುಸಿತದ ಹಾದಿಯಲ್ಲಿ ಸಾಗುತ್ತಿದೆ. ಆತಂಕ ಹೊರಹಾಕಿದೆ.
ಶಾಲೆಗೆ ದಾಖಲಾಗುವ ಮಕ್ಕಳ ಪ್ರಮಾಣ ಈ ಸಾಲಿನಲ್ಲಿ ಶೇ.71ಕ್ಕೆ ಕುಸಿದಿದ್ದು, ಭವಿಷ್ಯದಲ್ಲಿ ಇನ್ನಷ್ಟು ಕುಸಿಯುವ ಆತಂಕ ಎದುರಾಗಿದೆ. ಸಿಎಂ ಸಿದ್ದರಾಮಯ್ಯ, ಕನ್ನಡ ಬಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕನ್ನಡ ಶಾಲೆಗಳ ಗುಣಮಟ್ಟವನ್ನು ಹಾಳು ಮಾಡಿ, ದಾಖಲಾತಿ ಪ್ರಮಾಣವನ್ನು ಕುಸಿಯುವ ಹಾಗೆ ಮಾಡಿಮಾಡಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
“ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ – ಸರ್ಕಾರಿ ಶಾಲೆಗೆ ಮಕ್ಕಳು ದಾಖಲಾಗುತ್ತಿಲ್ಲ”
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಾಲೆಗೆ ದಾಖಲಾಗುವ ಮಕ್ಕಳ ಪ್ರಮಾಣ ಗಣನೀಯ ಕುಸಿತದ ಹಾದಿಯಲ್ಲಿ ಸಾಗುತ್ತಿದೆ.
ಶಾಲೆಗೆ ದಾಖಲಾಗುವ ಮಕ್ಕಳ ಪ್ರಮಾಣ ಈ ಸಾಲಿನಲ್ಲಿ ಶೇ.71ಕ್ಕೆ ಕುಸಿದಿದ್ದು, ಭವಿಷ್ಯದಲ್ಲಿ ಇನ್ನಷ್ಟು ಕುಸಿಯುವ ಆತಂಕ ಎದುರಾಗಿದೆ!!… pic.twitter.com/qWD73BSQPQ
— BJP Karnataka (@BJP4Karnataka) January 29, 2025