ಪುತ್ತೂರಿನ ಜಿದ್ದಾಜಿದ್ದಿ ಹೋರಾಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರಿಗೆ ಜಯ. ಪಕ್ಷೇತರ ಅರುಣ್ ಕುಮಾರ್ ಪುತ್ತಿಲ ಅವರಿಗೆ ಸೋಲು. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರಿಗೆ ಮೂರನೇ ಸ್ಥಾನ
ಮಂಗಳೂರು: ಹಿಂದೂತ್ವದ ಪ್ರಯೋಗ ಶಾಲೆ ಎಂದೇ ಗುರುತಾಗಿರುವ ದಕ್ಷಿಣಕನ್ನಡ ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಜಯಭೇರಿ ಭಾರಿಸಿದ್ದಾರೆ. ಬಿಜೆಪಿ ರಾಜ್ಯಅಧ್ಯಕ್ಷ ನಳಿನ್ ಕುಮಾರ್ ಅವರ ತವರಿನಲ್ಲೇ ಕಮಲಾ ಪಕ್ಷ ಹೀನಾಯವಾಗಿ ಸೋತಿರುವುದು ಈ ಚುನಾವಣೆಯ ಅಚ್ಚರಿ.
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಆಶಾ ತಿಮ್ಮಪ್ಪ, ಕಾಂಗ್ರೆಸ್ ಪಕ್ಷದ ಅಶೋಕ್ ಕುಮಾರ್ ರೈ ಕಣದಲ್ಲಿದ್ದರು. ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷೇತರರಾಗಿ ಕಣಕ್ಕಿಳಿದಿದ್ದರು.
ಈ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಪಕ್ಷೇತರರ ನಡುವೆ ಸ್ಪರ್ಧೆ ನಡೆಯುತ್ತಿದೆ ಎಂದೇ ಬಿಜೆಪಿ ನಾಯಕರು ಹೇಳಿಕೊಳ್ಳುತ್ತಿದ್ದರು.
ಇದೆಲ್ಲದರ ನಡುವೆ ಹಿಂದೂ ಮತಗಳು ವಿಭಜನೆಯಾಗಿದ್ದರಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರಿಗೆ ವರದಾನವಾಗಿತ್ತು.