ಬೆಂಗಳೂರು: ಕರ್ನಾಟಕದಲ್ಲೂ ಹಿಮಾಚಲ ಪ್ರದೇಶ ಮಾದರಿಯಲ್ಲೇ ಚುನಾವಣಾ ಫಲಿತಾಂಶ ಬರಲಿದೆ ಎಂದು ರಾಜ್ಯಸಭಾ ಸದ್ಯಸ ರಾಜೀವ್ ಶುಕ್ಲಾ ವಿಶ್ಲೇಷಿಸಿದ್ದಾರೆ.
ಕಾಂಗ್ರೆಸ್ ಪರ ಪ್ರಚಾರದ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಭ್ರಷ್ಟ ಸರ್ಕಾರವನ್ನು ಬಡಿದೋಡಿಸಿ, ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ಕರ್ನಾಟಕ ರಾಜ್ಯದ ಜನರ ಮುಂದೆ ಅವಕಾಶ ಎದುರಾಗಿದೆ. ಕಳೆದ ಬಾರಿ ಬಿಜೆಪಿ ನಮ್ಮ ಶಾಸಕರನ್ನು ಖರೀದಿ ಮಾಡಿ ಸರ್ಕಾರ ಬೀಳಿಸಿತ್ತು. ಹೀಗಾಗಿ ರಾಜ್ಯದ ಜನ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಲಿದ್ದಾರೆ ಎಂದರು.
ಹಿಮಾಚಲ ಪ್ರದೇಶದಲ್ಲೂ ಬಿಜೆಪಿ ಚುನಾವಣೆಯನ್ನು ಮೋದಿ ವರ್ಸಸ್ ಕಾಂಗ್ರೆಸ್ ಎಂಬಂತೆ ಪ್ರಚಾರ ಮಾಡಿತು. ನಂತರ ಮೋದಿ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಹೇಳಿದ ನಂತರ ಇದನ್ನು ನಿಲ್ಲಿಸಿದರು. ನಂತರ ಅವರ ಕೆಟ್ಟದಾಗಿ ಸೋತು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿತು. ಅದೇ ರೀತಿ ರಾಜ್ಯದಲ್ಲೂ ಆಗಲಿದೆ ಎಂದವರು ಬಣ್ಣಿಸಿದರು.
ಹಿಮಾಚಲ ಪ್ರದೇಶದಂತೆ ರಾಜ್ಯದಲ್ಲೂ ಬಿಜೆಪಿ ಬಂಡಾಯ ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಬಿಜೆಪಿ ಸೋಲುವುದು ಖಚಿತವಾಗಿದೆ ಎಂದವರು ಹೇಳಿದರು. ರಾಜ್ಯದಲ್ಲಿನ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದಾದರೆ, ಬಿಜೆಪಿ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ 1.50 ಲಕ್ಷ ಕೋಟಿ ಲೂಟಿ ಮಾಡಲಾಗಿದೆ. ಈ ಸರ್ಕಾರ ಟೆಂಡರ್ ಹಗರಣ, ಪಿಎಸ್ಐ ನೇಮಕಾತಿ, ಭಊ ಕಬಳಿಕೆ ಹಗರಣ, ಕೋವಿಡ್ ಹಗರಣ, ವಿಜೇಂದ್ರ ಹಗರಣ, ಮೊಟ್ಟೆ ಹಗರಣ, ಫಉಡ್ ಕಿಟ್ ಹಗರಣ, ಬಿಟ್ ಕಾಯಿನ್ ಹಗರಣ, ಸಿಡಿ ಹಗರಣ, ಬೆಡ್ ಹಗರಣ, ಬ್ಯಾಂಕ್ ಸಾಲ ಹಗರಣ, ರಾಘವೇಂದ್ರ ಬ್ಯಾಂಕ್ ಹಗರಣ, ಬಿಡಿಎ ಹಗರಣ ನಡೆಸಿದೆ ಎಂದು ಗಮನಸೆಳೆದರು.