ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕೇಕೆ ಮುಂದುವರಿದಿದ್ದು, ಬುಧವಾರದ ಅಂಕಿಅಂಶ ಬೆಚ್ಚಿಬೀಳಿಸಿದೆ. ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ.
ಬುಧವಾರ ಕೂಡಾ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್‌ಗಳು 4225 ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,97,004ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಬುಧವಾರ ಸಂಜೆಯ ಹೊತ್ತಿಗೆ 2928 ಮಂದಿಗೆ ಸೋಂಕು ದೃಢಪಟ್ಟಿರುವ ಮಾಹಿತಿ ಸಿಕ್ಕಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4,10,594ಕ್ಕೆ ಏರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಈ ನಡುವೆ, ಮಂಗಳವಾರ ಸಂಜೆಯಿಂದ ಬುಧವಾರ ಸಂಜೆಯ ನಡುವೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 26 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,567ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯು ಹೆಲ್ತ್ ಬುಲೆಟಿನ್ ಮೂಲಕ ಮಾಹಿತಿ ನೀಡಿದೆ.
https://mobile.twitter.com/DHFWKA/status/1377243875723538437