ಕಾರವಾರ: ಹಿಂದೂತ್ವದ ಭದ್ರಕೋಟೆ ಉತ್ತರಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪಾರುಪತ್ಯ ಮೆರೆದಿದೆ. ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಳೆದ
ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಮತದಾರರು ರಾಜಕೀಯ ಪುನರ್ಜನ್ಮ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಚಂಡ ದಿಗ್ವಿಜಯ ಸಾಧಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಪ್ರತಿಷ್ಠಿತ ಅಖಾಡವೆನಿಸಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಗ್ರೇಸ್ ಪಕ್ಷದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ BJP-JDS ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಉತ್ತರ ಕನ್ನಡ ಅವರು 2,33,205 ಮತಗಳ ಅಂತರದಿಂದ ದಿಗ್ವಿಜಯ ಸಾಧಿಸಿದ್ದಾರೆ.
ಮತಎಣಿಕೆಯುದ್ದಕ್ಕೂ ನಿರಂತರ ಮುನ್ನಡೆ ಸಾಧಿಸುತ್ತಾ ಬಂದ ವಿಶ್ವೇಶ್ವರ ಹೆಗಡೆ ಕಾಗೇರಿ ಅಂತಿಮವಾಗಿ ಜಯಭೇರಿ ಭಾರಿಸಿ BJP ಕಾರ್ಯಕರ್ತರ ಸಂಭ್ರಮಕ್ಕೆ ಕಾರಣರಾದರು.






















































