ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗು ಹಿರಿಯ ಪತ್ರಕರ್ತರಾದ ಶ್ರೀನಿವಾಸ ನಾಯಕ್ ಇಂದಾಜೆ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಘೊಷಣೆಯಾಗಿದೆ.
ಮಾಧ್ಯಮ ಅಕಾಡೆಮಿಯು 2019, 2020, 2021 ಮತ್ತು 2022 ನೇ ಸಾಲಿನ ಮಾಧ್ಯಮ ವಾರ್ಷಿಕ ಪ್ರಶಸ್ತಿ ಮತ್ತು ದತ್ತಿ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದು ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ 124 ಮಂದಿ ಪತ್ರಕರ್ತರನ್ನು ವಾರ್ಷಿಕ ಪ್ರಶಸ್ತಿಗೆ ಮತ್ತು 21 ಮಂದಿ ಪತ್ರಕರ್ತರನ್ನು ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಿದೆದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ.. ಯಾರು ಈ ಶ್ರೀನಿವಾಸ್ ನಾಯಕ್..?
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರನ್ನು 2021ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದ.ಕ.ಜಿಲ್ಲೆಯ ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ, ಆರ್.ರಾಮಕೃಷ್ಣ, ಗುರುವಪ್ಪ ಬಾಳೆಪುಣಿ, ಪಿ.ಬಿ.ಹರಿ ಪ್ರಸಾದ್ ರೈ, ರವೀಂದ್ರ ಶೆಟ್ಟಿ, ಎಸ್.ರವಿಪ್ರಕಾಶ್, ಸುಕನ್ಯ, ಕನ್ನಡ ಪ್ರಭ ವ್ಯಂಗ್ಯ ಚಿತ್ರಕಾರರಾದ ಸುಧಾಕರ ದರ್ಬೆ, ಅವರಿಗೂ ವಾರ್ಷಿಕ ಪ್ರಶಸ್ತಿ ಲಭಿಸಿದೆ.
ಪ್ರದೀಶ್ ಮರೋಡಿ ಅವರಿಗೆ ಅತ್ಯುತ್ತಮ ಮಾನವೀಯ ಸಮಸ್ಯೆ ಲೇಖನಕ್ಕೆ ನೀಡುವ ಮೈಸೂರು ದಿಗಂತ ಪ್ರಶಸ್ತಿ ಲಭಿಸಿದೆ. ಜಿಲ್ಲೆಯ ಹಲವು ಮಂದಿ ಪತ್ರಕರ್ತರ ಹೆಸರುಗಳು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕಾರ ಪಟ್ಟಿಯಲ್ಲಿವೆ.
ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ‘ಸ್ವಸ್ತಿಕ್ ಶ್ರೀ’ ರಾಜ್ಯ ಪ್ರಶಸ್ತಿ