ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದರಿಂದಾಗಿ ಮತ್ತೆ ಕಠಿಣಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ.
ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಿರುವ ಸರ್ಕಾರ, ಕೇರಳ ಹಾಗೂ ಮಹಾರಾಷ್ಟ್ರ ಗಡಿಗೆ ಜಿಲ್ಲೆಗಳಲ್ಲಿ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಘೋಷಿಸಿದೆ.
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಹೊಸ ಮಾರ್ಗಸೂಚಿ ಅನ್ವಯ ಆಗಸ್ಟ್ 16ರವರೆಗೂ ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಇರಲಿದೆ.
ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹಾಗೂ ಮಹಾರಾಷ್ಟ್ರ ಗಡಿ ಸಮೀಪದ ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಆರಂಭ ಆಗಲಿದೆ. ಸೋಮವಾರ ಮುಂಜಾನೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ. ಅಗತ್ಯವಸ್ತುಗಳ ಖರೀದಿಗೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಅವಕಾಶ ನೀಡಲಾಗುತ್ತದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2ರವರೆಗೆ ಅವಕಾಶ ಇದೆ. ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಮದ್ಯ ಪಾರ್ಸೆಲ್ಗೆ ಮಾತ್ರ ಅವಕಾಶ. ಹೋಮ್ ಡೆಲಿವರಿಗೆ ದಿನದ 24 ಗಂಟೆಯೂ ಅವಕಾಶ ಇರಲಿದೆ.