ಬೆಂಗಳೂರು: ಕರ್ನಾಟಕಕ್ಕೆ 1200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸುವಂತೆ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಸರ್ವೋಚ್ಚ ನ್ಯಾಯಾಲಯದ ಈ ಆದೇಶವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಜನರ ಪರವಾಗಿ ಈ ತೀರ್ಪನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ.
ನಮ್ಮ ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ @BJP4India ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟಿನ ಆದೇಶವನ್ನು ನಾಡಿನ ನೊಂದ ಜನರೆಲ್ಲರ ಪರವಾಗಿ ನಾನು ಸ್ವಾಗತಿಸುತ್ತೇನೆ. 1/4#COVID19
— Siddaramaiah (@siddaramaiah) May 7, 2021
ಕರ್ನಾಟಕಕ್ಕೆ ನಿತ್ಯ 1600 – 1700 ಮೆಟ್ರಿಕ್ ಟನ್ ಆಮ್ಲಜನಕದ ಅಗತ್ಯವಿದೆ, ಆದರೆ ಪ್ರಧಾನಿಯರು ನಿಗದಿ ಮಾಡಿದ್ದು 965 ಮೆಟ್ರಿಕ್ ಟನ್ ಮಾತ್ರ. ಇದರಿಂದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದುಕೊಳ್ಳಲಿದ್ದ ರಾಜ್ಯದ ಸಹಸ್ರಾರು ರೋಗಿಗಳ ಪ್ರಾಣವನ್ನು ಸುಪ್ರೀಂ ಕೋರ್ಟ್ ಉಳಿಸಿದೆ ಎಂದು ಸಿದ್ದರಾಮಯ್ಯ ಅವರು ಈ ತೀರ್ಪು ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕಕ್ಕೆ ನಿತ್ಯ 1600 – 1700 ಮೆಟ್ರಿಕ್ ಟನ್ ಆಮ್ಲಜನಕದ ಅಗತ್ಯವಿದೆ, ಆದರೆ @PMOIndia ನಿಗದಿ ಮಾಡಿದ್ದು 965 ಮೆಟ್ರಿಕ್ ಟನ್ ಮಾತ್ರ. ಇದರಿಂದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದುಕೊಳ್ಳಲಿದ್ದ ರಾಜ್ಯದ ಸಹಸ್ರಾರು ರೋಗಿಗಳ ಪ್ರಾಣವನ್ನು ಸುಪ್ರೀಂ ಕೋರ್ಟ್ ಉಳಿಸಿದೆ. 2/4#COVID19
— Siddaramaiah (@siddaramaiah) May 7, 2021
ಸುಪ್ರೀಂ ಕೋರ್ಟ್ ತಪರಾಕಿಯಿಂದ ಪ್ರಧಾನಿ ಈಗಲಾದರೂ ಬುದ್ದಿ ಕಲಿಯಲಿ. ಜನರ ಪ್ರಾಣದ ಜೊತೆ ಚೆಲ್ಲಾಟವಾಡುವ ಕ್ರೌರ್ಯವನ್ನು ನಿಲ್ಲಿಸಲಿ. ಕರ್ನಾಟಕಕ್ಕೆ ಅಗತ್ಯವಿರುವಷ್ಟು ಪ್ರಮಾಣದ ಆಮ್ಲಜನಕವನ್ನು ತಕ್ಷಣ ಪೂರೈಸಲಿ ಎಂದವರು ಪೋಸ್ಟ್ ಮಾಡಿದ್ದಾರೆ.
ಸುಪ್ರೀಂ ಕೋರ್ಟ್ ತಪರಾಕಿಯಿಂದ @PMOIndia ಈಗಲಾದರೂ ಬುದ್ದಿ ಕಲಿಯಲಿ. ಜನರ ಪ್ರಾಣದ ಜೊತೆ ಚೆಲ್ಲಾಟವಾಡುವ ಕ್ರೌರ್ಯವನ್ನು ನಿಲ್ಲಿಸಲಿ. ಕರ್ನಾಟಕಕ್ಕೆ ಅಗತ್ಯವಿರುವಷ್ಟು ಪ್ರಮಾಣದ ಆಮ್ಲಜನಕವನ್ನು ತಕ್ಷಣ ಪೂರೈಸಲಿ. 3/4#COVID19
— Siddaramaiah (@siddaramaiah) May 7, 2021
ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಅನ್ನು ಸಂಪೂರ್ಣ ಇಲ್ಲಿಯೇ ಬಳಕೆ ಮಾಡಿಕೊಳ್ಳಲು ಅವಕಾಶ ನೀಡುವಂತೆ ಹಾಗೂ ರಾಜ್ಯಕ್ಕೆ ನೀಡುವ ಆಕ್ಸಿಜನ್ ಪ್ರಮಾಣವನ್ನು 1500 ಮೆಟ್ರಿಕ್ ಟನ್ ಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ
ಹಾಗೂ ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಅನ್ನು ಸಂಪೂರ್ಣ ಇಲ್ಲಿಯೇ ಬಳಕೆ ಮಾಡಿಕೊಳ್ಳಲು ಅವಕಾಶ ನೀಡುವಂತೆ ಹಾಗೂ ರಾಜ್ಯಕ್ಕೆ ನೀಡುವ ಆಕ್ಸಿಜನ್ ಪ್ರಮಾಣವನ್ನು 1500 ಮೆಟ್ರಿಕ್ ಟನ್ ಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ @BSYBJP ಹಾಗೂ @BJP4Karnataka ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸುತ್ತೇನೆ. 4/4#COVID19
— Siddaramaiah (@siddaramaiah) May 7, 2021