ದೊಡ್ಡಬಳ್ಳಾಪುರ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ದೊಡ್ಡಬಳ್ಳಾಪುರ ದ ಕನ್ನಡಪರ ಹೋರಾಟಗಾರ ರಾಜಘಟ್ಟರವಿ ಅವರು ಆಯ್ಕೆಯಾಗಿದ್ದಾರೆ.
ಬಳ್ಳಾರಿಯಲ್ಲಿ ನಡೆದ ರಾಜ್ಯಮಟ್ಟದ ಕರವೇ ಸಭೆಯಲ್ಲಿ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ರವಿಯವರನ್ನು ಸಂಘಟನೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ರಾಜಘಟ್ಟ ರವಿ ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದು, ನಾಡು ನುಡಿ ವಿಚಾರದಲ್ಲಿ ಹೋರಾಟಗಳಲ್ಲಿ ಕೈಗೊಂಡಿದ್ದಾರೆ.
ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ರವಿ ಅವರನ್ನು ಕನ್ನಡಪರ ಸಂಘಟನೆಗಳ ಮುಖಂಡರು ಅಭಿನಂದಿಸಿದ್ದಾರೆ.