ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ. ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ https://karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ತಿಳಿಯಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಮೊದಲ ಹಂತದಲ್ಲಿ ಅನುತ್ತೀರ್ಣರಾದವರಿಗೆ ಮತ್ತಷ್ಟು ಅವಕಾಶ ನೀಡಲಾಗುತ್ತಿದ್ದು, ಎರಡನೇ ಬಾರಿಗೆ ಪೂರಕ ಪರೀಕ್ಷೆಗಳು ನಡೆದಿದ್ದವು. ಈ ವರ್ಷದಿಂದಲೇ 3 ಬಾರಿ ಪರೀಕ್ಷೆ ಬರೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ.