ಬೆಂಗಳೂರು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 25ರಿಂದ ನಡೆಯಲಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿಕಾಸಸೌಧದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪರೀಕ್ಷಾ ದಿನಾಂಕ ಪ್ರಕಟಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 22ರವರೆಗೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 25ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ ಎಂದು ಸಚಿವರು ತಿಳಿಸಿದರು.
ಈ ವರ್ಷ ರಾಜ್ಯದ 2,741 ಪರೀಕ್ಷಾ ಕೇಂದ್ರಗಳಲ್ಲಿ 8,96,271 ಮಕ್ಕಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ. ಅದರಂತೆಯೇ, 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.