ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರು ಎರಡು ವರ್ಷಗಳನ್ನು ಪೂರೈಸಿದ್ದಾರೆ. ಸಂಘಟನಾ ಚಾತುರ್ಯ ಮೂಲಕ ಗಮನಸೆಳೆದಿರುವ ನಳಿನ್ ಕುಮಾರ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.
ಆರೆಸ್ಸೆಸ್ ಮೂಲಕ ಕೇಸರಿ ಪಾಳಯದಲ್ಲಿ ಸೇನಾನಿಯಾದ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಸಂಸದರಾಗಿ ಆಯ್ಕೆಯಾದ ಬಳಿಕ ಬಿಜೆಪಿಯಲ್ಲೂ ಸಕ್ರಿಯರಾಗಿ ಗುರುತಿಸಿಕೊಂಡವರು. ಸಂಘದ ಮೇಲಿನ ನಿಷ್ಠೆ ಹಾಗೂ ಸಂಘದ ಹಿರಿಯರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡ ನಳಿನ್ ಕುಮಾರ್ ಅವರು ದಶಕದ ಹಿಂದೆ ಬಿಜೆಪಿ ಕೋರ್ ಕಮಿಟಿ ಸದಸ್ಯರಾಗುವ ಮೂಲಕ ಪಕ್ಷದಲ್ಲಿ ರಾಜ್ಯಮಟ್ಟದ ಜವಾಬ್ಧಾರಿ ವಹಿಕೊಂಡರು. ಅವರ ಸಂಘಟನಾ ಚಾತುರ್ಯವನ್ನು ಗಮನಿಸಿದ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿತು.
ಇದಿಗ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಬಿಜೆಪಿ ಸಾರಥ್ಯದ ಜವಾಬ್ಧಾರಿ ವಹಿಸಿ ಎರಡು ವರ್ಷಗಳಾಗಿವೆ. ಎರಡು ಸಂವತ್ಸರ ಪೂರೈಸಿದ ನಳಿನ್‌ಗೆ ಶುಭಾಶಯಗಳ ಮಹಾಮಳೆಯಾಗುತ್ತಿದೆ.
ಪಕ್ಷದ ಸಂಘಟನೆಗಾಗಿ ಹಗಲಿರುಳು ದುಡಿಯುತ್ತಿರುವ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಬಿಜೆಪಿ ಇನ್ನೂ ಎತ್ತರಕ್ಕೆ ಏರಲಿ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಶುಭ ಹಾರೈಸಿದ್ದಾರೆ.
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿರುವ ಸನ್ಮಾನ್ಯ ಶ್ರೀ @nalinkateel ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಪಕ್ಷದ ಸಂಘಟನೆಗಾಗಿ ಹಗಲಿರುಳು ದುಡಿಯುತ್ತಿರುವ ಶ್ರೀ ಕಟೀಲ್ ಅವರ ನೇತೃತ್ವದಲ್ಲಿ @BJP4Karnataka ಇನ್ನೂ ಎತ್ತರಕ್ಕೆ ಏರಲಿ ಎಂದು ಹಾರೈಸುತ್ತೇನೆ.#2YearsOfNKK pic.twitter.com/JOGytbP7o2
— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) August 27, 2021
ಕಟಿಲ್ ಅವರಿಗೆ ಶುಭ ಕೋರಿದ ಸಿಎಂ ಬಸವರಾಜ ಬೊಮ್ಮಾಯಿ, ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದೀರಿ. ಅದಕ್ಕಾಗಿ ಹಾರ್ದಿಕ ಅಭಿನಂದನೆಗಳು ಎಂದಿದ್ದಾರೆ. ಟ್ವೀಟ್ ಮಾಡಿ ಶುಭ ಹಾರೈಸಿರುವ ಸಿಎಂ, ಮುಂದಿನ ದಿನಗಳಲ್ಲಿ ತಮ್ಮ ನೇತೃತ್ವದಲ್ಲಿ ಪಕ್ಷ ಇನ್ನಷ್ಟು ಬಲಗೊಳ್ಳಲಿ. ಪಕ್ಷ ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಷಿ ಆಗಲಿ ಎಂದು ಆಶಿಸಿದ್ದಾರೆ.
ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಹಾರ್ದಿಕ ಅಭಿನಂದನೆಗಳು.
ಮುಂದಿನ ದಿನಗಳಲ್ಲಿ ಪಕ್ಷವು ತಮ್ಮ ನೇತೃತ್ವದಲ್ಲಿ ರಾಜ್ಯದಲ್ಲಿ ಇನ್ನಷ್ಟು ಬಲಗೊಳ್ಳಲಿ, ಸರ್ವ ವ್ಯಾಪಿ ಸರ್ವ ಸ್ಪರ್ಶಿಯಾಗಿ ಬೆಳೆಯಲಿ ಎಂದು ಶುಭ ಹಾರೃಸುತ್ತೇನೆ.@nalinkateel @BJP4Karnataka pic.twitter.com/Jg6WKXJuAQ
— Basavaraj S Bommai (Modi Ka Parivar) (@BSBommai) August 27, 2021