ಬೆಂಗಳೂರು: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. ಪ್ರಜ್ವಲ್ ದೇವರಾಜ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾದರೆ, ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟಿಯಾಗಿ ಗುರುತಾಗಿದ್ದಾರೆ. ಪಿಂಕಿ ಎಲ್ಲಿ ಸಿನಿಮಾಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ.
ಪ್ರಶಸ್ತಿ ಪಟ್ಟಿ ಹೀಗಿದೆ.
- ಅತ್ಯುತ್ತಮ ನಟ: ಪ್ರಜ್ವಲ್ ದೇವರಾಜ್ (ಚಿತ್ರ: ಜಂಟಲ್‌ಮನ್)
- ಅತ್ಯುತ್ತಮ ನಟಿ: ಅಕ್ಷತಾ ಪಾಂಡವಪುರ (ಚಿತ್ರ: ಪಿಂಕಿ ಎಲ್ಲಿ)
- ಅತ್ಯುತ್ತಮ ಪೋಷಕ ನಟ: ರಮೇಶ್ ಪಂಡಿತ್,
- ಅತ್ಯುತ್ತಮ ಪೋಷಕ ನಟಿ: ಮಂಜುಳಮ್ಮ,
- ಅತ್ಯುತ್ತಮ ಚಿತ್ರ: ಪಿಂಕಿ ಎಲ್ಲಿ
- 2ನೇ ಅತ್ಯುತ್ತಮ ಚಿತ್ರ: ವರ್ಣಪಟಲ
- 3ನೇ ಅತ್ಯುತ್ತಮ ಚಿತ್ರ: ಹರಿವ ನದಿಗೆ ಮೈಯೆಲ್ಲಾ ಕಾಲು
- ವಿಶೇಷ ಸಾಮಾಜಿಕ ಕಾಳಜಿ ಚಿತ್ರ: ಗಿಳಿಯು ಪಂಜರದೊಳಿಲ್ಲ ಮತ್ತು ಈ ಮಣ್ಣು
- ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಫೋರ್ ವಾಲ್ಸ್
- ಅತ್ಯುತ್ತಮ ಮಕ್ಕಳ ಚಿತ್ರ: ಪದಕ
- ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ನೀಲಿ ಹಕ್ಕಿ
- ಅತ್ಯುತ್ತಮ ಪ್ರಾದೇಶಿಕ ಚಿತ್ರ: ಜೀಟಿಗೆ
- ಅತ್ಯುತ್ತಮ ಸಂಗೀತ ನಿರ್ದೇಶಕ: ಗಗನ್ ಬಡೇರಿಯಾ
- ಅತ್ಯುತ್ತಮ ಸಂಕಲನ: ನಾಗೇಂದ್ರ
- ಅತ್ಯುತ್ತಮ ಕಥೆ: ಶಶಿಕಾಂತ್ ಗಟ್ಟಿ
- ಅತ್ಯುತ್ತಮ ಚಿತ್ರಕಥೆ: ರಾಘವೇಂದ್ರ ಕುಮಾರ್
- ಅತ್ಯುತ್ತಮ ಸಂಭಾಷಣೆ: ವೀರಪ್ಪ ಮರಳವಾಡಿ
- ಅತ್ಯುತ್ತಮ ಛಾಯಾಗ್ರಹಣ: ಅಶೋಕ್ ಕಶ್ಯಪ್