ಚೆನ್ನೈ: ಬಂಗಾಳಕೊಳ್ಳಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ದಕ್ಷಿಣದ ರಾಜ್ಯಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಕೆಲವು ದಿನಗಳಿಂದ ಮಳೆಯಿಂದಾಗಿ ತತ್ತರಿಸಿರುವ ತಮಿಳುನಾಡಿನಲ್ಲಿ ಇದೀಗ ಮತ್ತೆ ವರುಣನ ಆರ್ಭಟ ಕಂಡುಬಂದಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗಲಿದ್ದೆ. ತಮಿಳುನಾಡು, ಪಾಂಡಿಚೇರಿ ಮತ್ತು ಕಾರೈಕಲ್‌ಗಳಲ್ಲಿ ನವೆಂಬರಗ 29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ತಮಿಳುನಾಡಿನ 19 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕರ್ನಾಟಕದಲ್ಲೂ ಮಳೆ:
ಬಂಗಾಳಕೊಳ್ಳಿಯಲ್ಲಿ ವಾರುಭಾರ ಕುಸಿತದ ಪರಿಣಾಮವು ಕರ್ನಾಟಕದ ಮೇಲೂ ಬೀರಲಿದೆ. ಹವಾಮಾನ ಇಲಾಖೆಯ ಪ್ರಕಾರ ಕರ್ನಾಟಕದ ಕರಾವಳಿ, ಮಳೆನಾಡು, ಒಳನಾಡಿನಲ್ಲಿ ಮಳೆಯಾಗಲಿದೆ. ಬೆಂಗಳೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕಾರವಾರ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಡಿಸೆಂಬರ್ 1ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ಹವಾಮಾನ ಇಲಾಖೆಯ ತಜ್ಞರು ಮಾಹಿತಿ ಹಂಚಿಕೊಂಡಿದ್ದಾರೆ.