ಬೆಂಗಳೂರು ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆಯಾಗಿದೆ. ಬಿಜೆಪಿ ಭದ್ರಕೋಟೆಗೆ ಲಗ್ಗೆ ಹಾಕಲು ರಣವ್ಯೂಹ ರೂಪಿಸಿರುವ ಕಾಂಗ್ರೆಸ್ ಅಥಣಿ ಕ್ಷೇತ್ರದಲ್ಲಿ ಲಕ್ಷ್ಮಣ್ ಸವದಿ ಅವರಿಗೆ ಟಿಕೆಟ್ ಘೋಷಿಸಿದೆ. ಪುತ್ತೂರು ಕ್ಷೇತ್ರಕ್ಕೆ ಅಶೋಕ್ ಕುಮಾರ್ ರೈ ಹಾಗೂ ಮಂಗಳೂರು ದಕ್ಷಿಣಕ್ಕೆ ಜೆ.ಆರ್.ಲೋಬೋ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಘೋಷಿಸಿದೆ. ಕಾರ್ಕಳದಲ್ಲಿ ಉದಯ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ.
ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದ್ದ ಕೋಲಾರದಲ್ಲಿ ಕೊತ್ತೂರು ಮಂಜುನಾಥ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.























































