ಕಾರವಾರ: ಕಾರವಾರ ಸಮೀಪದ ಆಕೋಲ ಬಳಿ ಬಳಿ ಕೇಂದ್ರ ಸಚಿವರಿದ್ದ ಕಾರು ಅಪಘಾತಕ್ಕೀಡಾಗಿ ಇಬ್ಬರು ಸಾವನ್ನಪ್ಪಿದ್ದಾರೆ.
ಸೋಮವಾರ ಸಂಜೆ ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯ್ಕ್ ಅವರಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು ಸಚಿವ ಶ್ರೀಪಾದ್ ನಾಯ್ಕ್ ಅವರ ಪತ್ನಿ ಹಾಗೂ ಇನ್ನಿಬ್ಬರು ಅದೇ ಕಾರಿನಲ್ಲಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಚಿವರ ಪತ್ನಿ ವಿಜಯಾ ನಾಯ್ಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆನ್ನಲಾಗಿದೆ.
ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಘಟನೆ ಸಂಭವಿಸಿದ್ದು ಕಾರಿನಲ್ಲಿದ್ದ ಸಚಿವರು ಸೇರಿ ನಾಲ್ವರು ಗಾಯಗೊಂಡಿದ್ದರು. ಈ ಪೈಕಿ ಸಚಿವರ ಪತ್ನಿ ಸೇರಿ ಇಬ್ಬರು ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.