ಬೆಂಗಳೂರು: ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಅಂಗವಾಗಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಭಾನುವಾರ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮದಲ್ಲಿರುವ ನಾಡಪ್ರಭುಗಳ ವೀರ ಸಮಾಧಿಗೆ ಪೂಜೆ ಸಲ್ಲಿಸಿ ಗೌರವ ಸಮರ್ಪಣೆ ಮಾಡಿದರು. ಶಾಸಕ ಮಂಜುನಾಥ್, ಬಿಜೆಪಿ ಮುಖಂಡ ಎಚ್.ಎಂ.ಕೃಷ್ಣಮೂರ್ತಿ, ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಹುಲವಾಡಿ ದೇವರಾಜ್ ಮುಂತಾದವರು ಜತೆಯಲ್ಲಿದ್ದರು.



















































