ಬೆಂಗಳೂರು: ನಾಡಪ್ರಭು ಕೆಂಪೇಗೌಡರ ನೂರೆಂಟು ಅಡಿ ಎತ್ತರದ ಪ್ರತಿಮೆ ಅನಾವರಣ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧದ ಆರೋಪ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಒಕ್ಕಲಿಗ ಸಮುದಾಯದ ಮಂದಿ ಈ ವಿಚಾರದಲ್ಲಿ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿರುವುದು ಬಿಜೆಪಿಗೂ ಸವಾಲು ಎಂಬಂತಾಗಿದೆ.
ಮೋದಿಯವರನ್ನೇ ದಿಕ್ಕುತಪ್ಪಿಸಿದರೇ ಬೊಮ್ಮಾಯಿ?
ಈ ಬಗ್ಗೆ ಆರೋಪಿಸಿರುವ ಜೆಡಿಎಸ್ ಬಿಜೆಪಿ ಸರ್ಕಾರ ಹಾಗೂ ಆ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದೆ. ಅಲ್ಲದೆ, ಕೆಂಪೇಗೌಡರನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ರಾಜಕೀಯಕ್ಕೆ ಎಳೆದು ತಂದಿದ್ದಾರೆ ಎಂದು ಕಿಡಿಕಾರಿದೆ.
ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಹೆಚ್.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಜೆಡಿಎಸ್ ಟ್ವೀಟ್ ಮಾಡಿ ಅಕ್ರೊಶ ವ್ಯಕ್ತಪಡಿಸಿದೆ.
ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಶ್ರೀ @H_D_Devegowda ಅವರನ್ನು ಶ್ರೀ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ @BJP4Karnataka ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ.1/7 pic.twitter.com/Zkr37zeSMl
— Janata Dal Secular (@JanataDal_S) November 11, 2022
ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ್ದ ಬಿಜೆಪಿ ಸರ್ಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ? ಎಂದು ಜೆಡಿಎಸ್ ಪ್ರಶ್ನೆ ಮಾಡಿದೆ. ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ. ರಾಜ್ಯ ಬಿಜೆಪಿ ಸರಕಾರ, ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ ಎಂದು ಟೀಕಿಸಿದೆ.
ಕೆಂಪೇಗೌಡರು ಕೇಂದ್ರದ ಬಿಜೆಪಿ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ಟ್ವೀಟ್ ಮೂಲಕ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಬೊಮ್ಮಾಯಿ ಸರ್ಕಾರ ಎಡವಿದ್ದೆಲ್ಲಿ?
ಜೆಡಿಎಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದೆ ಎಂದು ಸ್ಪಷ್ಟಪಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಖುದ್ದು ಸಿಎಂ ಬಸವರಾಜ್ ಬೊಮ್ಮಾಯಿಯವರೇ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದಿದೆ.
https://twitter.com/BJP4Karnataka/status/1591077138966663168?t=Wrt4NcQND1GKWWixNrxmWA&s=19
ಬಿಜೆಪಿ ಮಾಡಿರುವ ಟ್ವೀಟ್‌ನಲ್ಲಿ ಸಿಎಂ ಅವರು ದೇವೇಗೌಡರಿಗೆ ಬರೆದ ಪತ್ರವೊಂದನ್ನು ಪೋಸ್ಟ್ ಮಾಡಲಾಗಿದೆ. ಅದರಲ್ಲಿ ನಮೂದಾಗಿರುವ ದಿನಾಂಕ ನವೆಂಬರ್ 10. ಕಾರ್ಯಕ್ರಮದ ಮುನ್ಬಾ ದಿನದ ಪತ್ರ ಇದಾಗಿರಬಹುದೇ? ಈ ಪತ್ರವನ್ನು ಗೌಡರಿಗೆ ತಲುಪಿಸಲಾಗಿದೆಯೇ? ತಲುಪಿಸಿದ್ದರೆ ಯಾವಾಗ ತಲುಪಿಸಲಾಗಿದೆ? ಮುಖ್ಯಮಂತ್ರಿಯವರು ಕೇವಲ ದೂರವಾಣಿ ಕರೆ ಮಾಡಿ ಕೈತೊಳೆದಿರುವುದೇಕೆ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಪ್ರತಿಧ್ವನಿಸಿದೆ.
ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ.
ಸರಿ; ನವೆಂಬರ್ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? 2/8
— Janata Dal Secular (@JanataDal_S) November 12, 2022
ಇದೇ ವೇಳೆ ಬಿಜೆಪಿಯ ಸ್ಪಷ್ಟನೆಗೆ, ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಜೆಡಿಎಸ್, ‘ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ದೇವೇಗೌಡರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ ಎಂದು ಆರೋಪಿಸಿದೆ.
ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ.
ಸರಿ; ನವೆಂಬರ್ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? 2/8
— Janata Dal Secular (@JanataDal_S) November 12, 2022
ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ? ಎಂದು ಜೆಡಿಎಸ್ ಪಕ್ಷ ಮಾರ್ಮಿಕವಾಗಿ ಪ್ರಶ್ನೆ ಮಾಡಿದೆ.
ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ!! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ? ಎಂಬುದು ಜೆಡಿಎಸ್ ಪ್ರಶ್ನೆ.
ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ ಎಂದು ಜೆಡಿಎಸ್ ಪಕ್ಷವು ಬಿಜೆಪಿಯ ಸ್ಪಷ್ಟನೆಗೆ ಎದಿರೇಟು ನೀಡಿದೆ.
ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು? 6/8
— Janata Dal Secular (@JanataDal_S) November 12, 2022
ಬಿಜೆಪಿಯೊಳಗಿನ ಒಕ್ಕಲಿಗರಲ್ಲೂ ಅಸಮಾಧಾನ:
ಕೆಂಪೇಗೌಡರ ಪುತ್ಥಳಿ ಅನಾವಣ ಕಾರ್ಯಕ್ರಮದಲ್ಲಿನ ಗೊಂದಲ ಬಗ್ಗೆ ಒಕ್ಕಲಿಗ ಸಮುದಾಯದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಬಸವರಾಜ್ ಬೊಮ್ಮಾಯಿ ಸರ್ಕಾರ ಒಂದಿಬ್ಬರ ಹಿತಕ್ಕಾಗಿ ಪ್ರತಿಮೆ ರಾಜಕಾರಣಕ್ಕೆ ಮುಂದಾಗಿದೆ. ಈ ಮೂಲಕ ಇಡೀ ಒಕ್ಕಲಿಗ ಸಮುದಾಯವನ್ನು ಕಡೆಗಣಿಸಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಪ್ರತಿಮೆ ಅನಾವರಣ ಸಮಾರಂಭದಲ್ಲಿ ಒಕ್ಜಲಿಗ ಸಮುದಾಯದ ಪ್ರಮುಖ ಮುಖಂಡರ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಭಾಷಣ ವಿಚಾರದಲ್ಲೂ ಒಕ್ಕಲಿಗ ನಾಯಕರಿಗೆ ಆದ್ಯತೆ ನೀಡಲಿಲ್ಲ’ ಎಂಬ ಬಿಜೆಪಿಯೊಳಗಿನವರ ಆಕ್ರೋಶವೇ ಇದೀಗ ಕಮಲ ಪಾಳಯಕ್ಕೆ ಸಮಾಲು ಎಂಬಂತಿದೆ. ಮೋದಿಯವರಿಗೆ ಅರಿವಿಲ್ಲದಂತೆಯೇ ಬೊಮ್ಮಾಯಿ ಬಣ ಈ ರೀತಿ ಅವಾಂತರ ಮಾಡಿದೆ ಎಂಬ ಬಿಜೆಪಿಯಲ್ಲಿನ ಒಕ್ಕಲಿಗ ಮುಖಂಡರು ಅಸಮಾಧಾನ ವ್ಯಕ್ತಪಡಿಸುತ್ತಿರುವ ಬೆಳವಣಿಗೆಯು ಆಡಳಿತ ಪಕ್ಷದೊಳಗಿನ ಅಚ್ಚರಿ.
























































