ಚಿಕ್ಕಮಗಳೂರು : ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣದಲ್ಲಿ ಆರೋಪಿಗಳನ್ನು ಅಮಾಯಕರು ಎಂಬ ನಿರ್ಧಾರಕ್ಕೆ ಬಂದಿರುವ ಕಾಂಗ್ರೆಸ್ ನಾಯಕರ ನಿಲುವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ.ರವಿ ಖಂಡಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಆರೋಪಿಗಳನ್ನ ಅಮಾಯಕರು ಅನ್ನುವ ಸ್ಥಿತಿಗೆ ಬಂದಿರುವುದು ನಿಜಕ್ಕೂ ಅಪಾಯಕಾರಿ ಎಂದಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಡಿಜೆ ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯ ಆರೋಪಿಗಳನ್ನು ಅಮಾಯಕರು ಅನ್ನುವುದು ಖಂಡನೀಯ. ಇಂತಹ ಮಾನಸಿಕತೆಯು ದೇಶದ ಸಮಗ್ರತೆಗೆ ಧಕ್ಕೆ ತರುವಂಥದ್ದು. ಹಾಗಾಗಿ ಈ ವಿಚಾರದಲ್ಲಿ ಸರ್ಕಾರ ನಿಯಮ ಬಾಹಿರ ಕ್ರಮ ಕೈಗೊಂಡಿದ್ದೇ ಆದಲ್ಲಿ ನಾವು ಕಾನೂನು ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಘೋಷಿಸಿದರು.
ಉಗ್ರ ಚಟುವಟಿಕ ಯಲ್ಲಿ ತೊಡಗಿರುವ ಆರೋಪಿಗಳನ್ನು ರಕ್ಷಣೆ ಮಾಡುವುದು ಸರಿಯಲ್ಲ ಎಂದ ಅವರು, ಒಳ್ಳೆಯರು ಯಾರು, ಕೆಟ್ಟವರು ಯಾರು ಎಂಬುದು ತಿಳಿದುಕೊಳ್ಳದಿದ್ರೆ ರಾಜ್ಯದ ಪರಿಸ್ಥಿತಿ ಏನಾಗಬಹುದ ಎಂದು ಸರ್ಕಾರವನ್ನು ತರಾಟಗೆ ತೆಗೆದುಕೊಂಡರು.