ಬೆಂಗಳೂರು: ಕೇಂದ್ರ ಸರ್ಕಾರದೊಂದಿಗೆ ನಡೆದಿರುವ ಮಾತುಕತೆ ಬಗ್ಗೆ ಅಸಮಾಧಾನಗೊಂಡಿರುವ ರೈತ ಸಂಘಟನೆಗಳು ಕೃಷಿ ಕಾಯ್ದೆ ವೇಳೆ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಲು ತೀರ್ಮಾನಿಸಿವೆ. ಈ ವಿಚಾರದಲ್ಲಿ ನಡೆಯುವ ಹೋರಾಟಗಳನ್ನು ಬೆಂಬಲಿಸಲು ಕರ್ನಾಟಕ ಕಿಸಾನ್ ಕಾಂಗ್ರೆಸ್ ತೀರ್ಮಾನಿಸಿದೆ.
ಈ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ, ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳ ವಿರುದ್ಧದ ಸರಣಿ ಪ್ರತಿಭಟನೆಗಳನ್ನು ಬೆಂಬಲಿಸಲಾಗುವುದು ಎಂದು ತಿಳಿಸಿದ್ದಾರೆ.
ರೈತ ಸಂಘಗಳು ಡಿಸೆಂಬರ್ 5 ರಂದು ಪ್ರಧಾನಿ ಮೋದಿಯವರ ಪ್ರತಿಮೆ ಸುಡುವಿಕೆ, ಡಿಸೆಂಬರ್ 7ರಂದು ಪ್ರಶಸ್ತಿಗಳನ್ನು ಹಿಂದಿರುಗಿಸುವುದು ಮತ್ತು ಡಿಸೆಂಬರ್ 8ರ ಭಾರತ್ ಬಂದ್ ಕರೆಗೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲು ರಾಜ್ಯ ಕಾರ್ಯಕಾರಿಣಿಯಲ್ಲಿ ತೀರ್ಮಾನಿಸಲಾಗಿದೆ ಎಂದಿದ್ದಾರೆ.