ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ಏಪ್ರಿಲ್ ನಿಂದ ಜುಲೈ ತ್ರೈ ಮಾಸಿಕದ ಸೌಲಭ್ಯವನ್ನು ಇಂದು ಬಿಡುಗಡೆ ಮಾಡಿದರು.
ವರ್ಚುವಲ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾಲ್ಗೊಂಡರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ.ಮೋಹನ್ ಉಪಸ್ಥಿತರಿದ್ದರು.