ಆಳಂದ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಆಳಂದ ಪಟ್ಟಣದಲ್ಲಿ ರೂ. 5 ಕೋಟಿ ರೂ ವೆಚ್ಚದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣವಾಗಲಿದೆ. ಈ ನೂತನ ಬಸ್ ನಿಲ್ದಾಣದ ನಿರ್ಮಾಣ ಕಾಮಗಾರಿಗೆ ಆಳಂದ ಕೇಂದ್ರ ಬಸ್ ನಿಲ್ದಾಣದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಯಿತು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನೂತನ ಬಸ್ ನಿಲ್ದಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ, ಸಾರಿಗೆ ಕ್ಷೇತ್ರದ ಮಹತ್ವಾಕಾಂಕ್ಷೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಸಾರಿಗೆ ನಿಗಮಗಳ 36 ಮೃತ ಸಿಬ್ಬಂದಿಗಳ ಅವಲಂಬಿತರಿಗೆ ಅನುಕಂಪ ಆಧಾರದ ಹುದ್ದೆಗಳಿಗೆ ನೇಮಕಾತಿ ಆದೇಶವನ್ನು ವಿತರಿಸಲಾಯಿತು. ಬಸ್ ಅಪಘಾತದಲ್ಲಿ ಮೃತಪಟ್ಟ ಇಬ್ಬರು ಪ್ರಯಾಣಿಕರ ಕುಟುಂಬದವರಿಗೆ ರೂ10 ಲಕ್ಷಗಳ ಚೆಕ್ ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮಗಳಲ್ಲಿ ಲೋಕಸಭಾ ಸದಸ್ಯ ಸಾಗರ್ ಖಂಡ್ರೆ, ಶಾಸಕರಾದ ಬಿಆರ್ ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ್, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಬಿ. ಸುಶೀಲಾ, ವಿಭಾಗೀಯ ನಿಯಂತ್ರಣಾಧಿಕಾರಿ ಸುನಿಲಕುಮಾರ್ ಚಂದರಗಿ, ಸೇರಿದಂತೆ ಅನೇಕ ಗಣಿಯ ಉಪಸ್ಥಿತರಿದ್ದರು.




























































