ಬೆಂಗಳೂರು: ಕೆ.ಆರ್.ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಗೆ ಹರಿಯುವ ಕೋರಮಂಗಲ ಕಣಿವೆ ( ಕೆ.-100)ನ್ನು ಜಲಮಾರ್ಗ ಯೋಜನೆಯನ್ನಾಗಿ ಪರಿವರ್ತಿಸುವ ಯೋಜನೆಗೆ ಸರ್ಕಾರ ಮುನ್ನುಡಿ ಬರೆದಿದೆ.
ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಯೋಜನೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ. ಶಾಂತಿನಗರ ಬಸ್ ನಿಲ್ದಾಣದ ಬಳಿ ಆಯೋಜಿಸಲಾದ ಈ ಶಿಲಾನ್ಯಾಸ ಸಮಾರಂಭದಲ್ಲಿ ಶಾಸಕ ಉದಯ್ ಗರುಡಾಚಾರ್, ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ನಂದೀಶ್ ರೆಡ್ಡಿ, ವಿಧಾನಪರಿಷತ್ ಸದಸ್ಯ ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಬಿ.ಬಿ.ಎಂ.ಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.