ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಯಿತು.
ಅಗತ್ಯ ವಸ್ತುಗಳ ಬೆಲೆ ಏರಿಕೆ, ತೈಲ ಬೆಲೆ ಏರಿಕೆ ವಿರುದ್ದ ಬೀದಿಗಿಳಿದ ಕೈ ಕಾರ್ಯಕರ್ತರು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೂ ವಿರೋಧ ವ್ಯಕ್ತಪಡಿಸಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದತ್ತ ನಡೆದ ಸೈಕಲ್ ಜಾಥಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹಿತ ಅನೇಕ ನಾಯಕರು ಕೆಪಿಸಿಸಿ ವಿವಿಧ ಘಟಕಗಳ ಪ್ರಮುಖರು ಸೈಕಲ್ ಜಾಥಾದಲ್ಲಿ ಭಾಗಿಯಾದರು.























































