ಬೆಂಗಳೂರು: 2021 ಇಸವಿಯನ್ನು ಕಾಂಗ್ರೆಸ್ ಪಕ್ಷವು ಹೋರಾಟದ ವರ್ಷ, ಪಕ್ಷ ಸಂಘಟನೆ ವರ್ಷ ಎಂದು ಘೋಷಣೆ ಮಾಡಿದ್ದು ಈ ಅಭಿಯಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುನ್ನುಡಿ ಬರೆದಿದ್ದಾರೆ. ಈ ಘೋಷಣೆಯಂತೆ ಬ್ಲಾಕ್ ಮಟ್ಟದಲ್ಲಿ ಸಂಚಲನ ಮೂಡಿಸಲು ಹೆಜ್ಜೆ ಒಟ್ಟಿರುವ ಡಿ.ಕೆ.ಶಿ, ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಾರ್ಯಕರ್ತರ ಧ್ವನಿ ನಾಯಕರ ಧ್ವನಿಯಾಗಬೇಕು. ಈ ನಿಟ್ಟಿನಲ್ಲಿ ಬುಧವಾರ ಮಂಗಳೂರಿನಲ್ಲಿ ಮೈಸೂರು ವಿಭಾಗದ ಜಿಲ್ಲೆಗಳ ಪಕ್ಷ ನಾಯಕರು, ಬ್ಲಾಕ್ ಅಧ್ಯಕ್ಷರ ಜತೆ ಕರೆದಿದ್ದೇನೆ. ಇದು ಪಕ್ಷದ ಆಂತರಿಕ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.
ಜ. 8 ರಂದು ಬೆಂಗಳೂರಿನಲ್ಲಿ ಸಭೆ ನಡೆಸಿ, ನಂತರ ಹುಬ್ಬಳ್ಳಿಯಲ್ಲಿ ಬೆಳಗಾವಿ ವಿಭಾಗದ ಸಭೆ, ಜ.18 ರಂದು ಗುಲ್ಬರ್ಗದಲ್ಲಿ ಸಭೆ ನಡೆಸುವುದಾಗಿ ತಿಳಿಸಿದರು.
ಅನುಭವ ಮಂಟಪ ಶಂಕುಸ್ಥಾಪನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ಚುನಾವಣೆ ತಂತ್ರ. ಬಸವ ಕಲ್ಯಾಣ ಉಪಚುನಾವಣೆ ಗೆಲ್ಲಲು ಈ ರೀತಿ ಮಾಡಿದ್ದಾರೆ. ಆದರೆ ಈ ಯೋಜನೆ ತೀರ್ಮಾನ ಮಾಡಿದ್ದು ನಮ್ಮ ಪಕ್ಷ. ಅವರು ರಾಜಕೀಯಕ್ಕಾಗಿ ಮಾಡುತ್ತಿದ್ದಾರೆ ಮಾಡಿಕೊಳ್ಳಲಿ. ಅವರಿಗಿರುವ ಹಕ್ಕನ್ನು ನಾನು ಪ್ರಶ್ನಿಸುವುದಿಲ್ಲ ಎಂದರು.