ಬೆಂಗಳೂರು: ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಅವರು ಕೆಪಿಸಿಸಿಯಲ್ಲಿ ಮಂಗಳವಾರ ನಡೆಸಿದ್ದ ಸುದ್ದಿಗೋಷ್ಟಿ ಕೈ ನಾಯಕರನ್ನೇ ಮುಜುಗರಕ್ಕೀಡು ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿ. ಅವರ ಬಗ್ಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಸಲೀಂ ಹಾಗೂ ಮಾಜಿ ಶಾಸಕ ಉಗ್ರಪ್ಪ ನಡುವಿನ ಸಂಭಾಷಣೆ ಇದೀಗ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿದೆ. ಡಿಕೆಶಿ ಅವರ ಭ್ರಷ್ಟಾಚಾರ ಬಗ್ಗೆ ಈ ಸಂಭಾಷಣೆ ಬೊಟ್ಟು ಮಾಡುವಂತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
In a live press conference, senior @INCKarnataka leaders discuss that the "Boys" of their President @DKShivakumar have COLLECTED crores of rupees.
They also wonder how much "DKS" would have COLLECTED.
Kannadigas are wondering how much the "Fake Gandhis" would have COLLECTED. pic.twitter.com/om0Lb0usBk
— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) October 13, 2021
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ‘ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಕಾಂಗ್ರೆಸ್ ಕಚೇರಿಯಲ್ಲೇ ಬಹಿರಂಗಪಡಿಸಿದ್ದಾರೆ ಎಂದರೆ ಕೆಪಿಸಿಸಿಗೆ ಎಂಥ ದುರ್ಗತಿ ಬಂದಿರಬಹುದು? ಎಂದು ವ್ಯಂಗ್ಯವಾಡಿದ್ದಾರೆ.
ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು @INCKarnataka ಕಚೇರಿಯಲ್ಲೇ ಬಹಿರಂಗಪಡಿಸಿದ್ದಾರೆ ಎಂದರೆ ಕೆಪಿಸಿಸಿಗೆ ಎಂಥ ದುರ್ಗತಿ ಬಂದಿರಬಹುದು?#CorruptDKS
— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) October 13, 2021
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಡೆಸುತ್ತಿರುವ ಕಲೆಕ್ಷನ್ ಗುಟ್ಟನ್ನು ಕೊನೆಗೂ ಅವರದೇ ಪಕ್ಷದ ಮುಖಂಡರಾದ ವಿ.ಎಸ್.ಉಗ್ರಪ್ಪ ಮತ್ತು ಸಲೀಂ ಅಹಮ್ಮದ್ ಗುಸುಗುಸಿನಲ್ಲೇ ಜಗಜ್ಜಾಹಿರು ಮಾಡಿದ್ದಾರೆ. ಕಾಣದ ಕಲೆಕ್ಷನ್ ಇನ್ನು ಎಷ್ಟಿರಬಹುದು? ಎಂದು ರವಿ ಪ್ರಶ್ನಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ@DKShivakumar ಅವರು ನಡೆಸುತ್ತಿರುವ ಕಲೆಕ್ಷನ್ ಗುಟ್ಟನ್ನು ಕೊನೆಗೂ ಅವರದೇ ಪಕ್ಷದ ಮುಖಂಡರಾದ ವಿ.ಎಸ್.ಉಗ್ರಪ್ಪ ಮತ್ತು ಸಲೀಂ ಅಹಮ್ಮದ್ ಗುಸುಗುಸಿನಲ್ಲೇ ಜಗಜ್ಜಾಹಿರು ಮಾಡಿದ್ದಾರೆ.
ಕಾಣದ ಕಲೆಕ್ಷನ್ ಇನ್ನು ಎಷ್ಟಿರಬಹುದು?#CorruptDKS
— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) October 13, 2021
ಸಿದ್ದರಾಮಯ್ಯನವರ ಶಿಷ್ಯ ಪಡೆ ನಿಮಗೆ ಖೆಡ್ಡಾ ತೋಡಲು ಪ್ರಾಯಶಃ ಸಜ್ಜಾಗಿರುವಂತೆ ಕಾಣುತ್ತಿದೆ. ಒಂದು ಕಡೆ ತಮ್ಮ ನಾಯಕನನ್ನು ಹೊಗಳಿ, ಇನ್ನೊಂದು ಕಡೆ ನಿಮ್ಮನ್ನು ಜನತೆ ಮುಂದೆ ಬೆತ್ತಲು ಮಾಡಲು ಹೊರಟಿದಂತಿದೆ. ಯಾವುದಕ್ಕೂ ಎಚ್ಚೆತ್ತುಕೊಳ್ಳುವುದು ಒಳಿತು ಎಂದು ಸಿ.ಟಿ.ರವಿ ಕಾಂಗ್ರೆಸ್ ಪಕ್ಷದ ಒಳ ಸುಳಿ ಬಗ್ಗೆ ತಮ್ಮದೇ ದಾಟಿಯಲ್ಲಿ ವ್ಯಾಖ್ಯಾನಿಸಿದ್ದಾರೆ.
ಸಿದ್ದರಾಮಯ್ಯನವರ ಶಿಷ್ಯ ಪಡೆ ನಿಮಗೆ ಖೆಡ್ಡಾ ತೋಡಲು ಪ್ರಾಯಶಃ ಸಜ್ಜಾಗಿರುವಂತೆ ಕಾಣುತ್ತಿದೆ.
ಒಂದು ಕಡೆ ತಮ್ಮ ನಾಯಕನನ್ನು ಹೊಗಳಿ, ಇನ್ನೊಂದು ಕಡೆ ನಿಮ್ಮನ್ನು ಜನತೆ ಮುಂದೆ ಬೆತ್ತಲು ಮಾಡಲು ಹೊರಟಿದಂತಿದೆ. ಯಾವುದಕ್ಕೂ ಎಚ್ಚೆತ್ತುಕೊಳ್ಳುವುದು ಒಳಿತು.#CorruptDKS
— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) October 13, 2021
ಐಟಿ-ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಬೊಬ್ಬೆ ಹೊಡೆಯುವ ನಾಯಕರೇ ನಿಮ್ಮ ಅಧ್ಯಕ್ಷರ ಬ್ರಹ್ಮಾಂಡ ಭ್ರಷ್ಟಾಚಾರ ಬೆತ್ತಲಾಗಿದೆ. ಭ್ರಷ್ಟ ಅಧ್ಯಕ್ಷನನ್ನು ಇಟ್ಟುಕೊಂಡು ಉಪಚುನಾವಣೆಯಲ್ಲಿ ಯಾವ ಮುಖವಿಟ್ಟುಕೊಂಡು ಮತ ಕೇಳುತ್ತೀರಿ? ಎಂದು ರವಿ ಕೈ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಐಟಿ-ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಬೊಬ್ಬೆ ಹೊಡೆಯುವ ನಾಯಕರೇ ನಿಮ್ಮ ಅಧ್ಯಕ್ಷರ ಬ್ರಹ್ಮಾಂಡ ಭ್ರಷ್ಟಾಚಾರ ಬೆತ್ತಲಾಗಿದೆ.
ಭ್ರಷ್ಟ ಅಧ್ಯಕ್ಷನನ್ನು ಇಟ್ಟುಕೊಂಡು ಉಪಚುನಾವಣೆಯಲ್ಲಿ ಯಾವ ಮುಖವಿಟ್ಟುಕೊಂಡು ಮತ ಕೇಳುತ್ತೀರಿ?#CorruptDKS
— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) October 13, 2021