ಬಳ್ಳಾರಿ: ಪ್ರದೇಶ ಕಾಂಗ್ರೆಸ್ ನಾಯಕಿ, ಮಹಿಳಾ ಕಾಂಗ್ರೆಸ್ನ ರಾಜ್ಯ ಕಾರ್ಯದರ್ಶಿ ಕ್ಯಾರೋಲಿನ್ ಲೂಸಿಯಾ ಸ್ಮಿತ್ ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿಗೊಳಗಾಗಿರುವ ಇವರು ಮೃತಪಟ್ಟಿರುವ ಬಗ್ಗೆ ಕಾಂಗ್ರೆಸ್ ನಾಯಕರು ದುಃಖ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಕಾರ್ಯದರ್ಶಿಯಾಗಿದ್ದ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಶ್ರೀಮತಿ ಕ್ಯಾರೋಲಿನ್ ಲೂಸಿಯಾ ಸ್ಮಿತ್ ಅವರು ಕರೋನಾ ಸೋಂಕಿನಿಂದ ನಿಧನರಾಗಿದ್ದು ಆಘಾತಕಾರಿ ಸಂಗತಿ ಎಂದಿದೆ.
ಮಹಿಳಾ ಕಾಂಗ್ರೆಸ್ನ ರಾಜ್ಯ ಕಾರ್ಯದರ್ಶಿಯಾಗಿದ್ದ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಶ್ರೀಮತಿ ಕ್ಯಾರೋಲಿನ್ ಲೂಸಿಯಾ ಸ್ಮಿತ್ ಅವರು ಕರೋನಾ ಸೋಂಕಿನಿಂದ ನಿಧನರಾಗಿದ್ದು ಆಘಾತಕಾರಿ ಸಂಗತಿ.
ಅವರ ಆತ್ಮಕ್ಕೆ ಶಾಂತಿ ಕೋರುತ್ತಾ ಅವರ ಕುಟುಂಬಕ್ಕೆ ಅಗಲಿಕೆ ಸಹಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. pic.twitter.com/MlZdDZnYdK
— Karnataka Congress (@INCKarnataka) May 29, 2021